ರಾಜ್ಯದಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

1st Standard Admission Age in Karnataka
1st Standard Admission Age in Karnataka

ಕರ್ನಾಟಕ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1 ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಮಿತಿ(1st Standard Admission Age Relaxation)ಯನ್ನು 6 ವರ್ಷದಿಂದ 5 ವರ್ಷ 5 ತಿಂಗಳಿಗೆ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ.

ಪೋಷಕರು ಹಾಗೂ ಮಕ್ಕಳಿಗೆ ರಾಜ್ಯ ಸರ್ಕಾರ ಈ ಬಾರಿ 1 ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡುವ ಮುಖಾಂತರ ಗುಡ್ ನ್ಯೂಸ್ ನೀಡಿದೆ. ಕಳೆದ ಸಾಲಿನಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಗುವಿಗೆ ಸರಿಯಾಗಿ 6 ವರ್ಷ ತುಂಬಿರಬೇಕಿತ್ತು. ಆದರೆ ಈ ಬಾರಿ ಪೋಷಕರ ಮನವಿ ಮೇರೆಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಕ್ಕೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಪೋಷಕರ ಮನವಿ ಮೇರೆಗೆ ವಯೋಮಿತಿ ಸಡಿಲಿಕೆ:

ಒಂದನೇ ತರಗತಿ ಪ್ರವೇಶಾತಿಗೆ ಪ್ರಸ್ತುತ ನಿಗದಿಪಡಿಸಿರುವ ಕನಿಷ್ಠ 6 ವರ್ಷಗಳ ವಯೋಮಿತಿಯನ್ನು ಸಡಿಲಿಸಲು ರಾಜ್ಯಾದ್ಯಂತ ಪೋಷಕರಿಂದ ಹಲವಾರು ಮನವಿಗಳು ಸ್ವೀಕೃತವಾಗುತ್ತಿದ್ದು, SEP ವರದಿಯ ಆಧಾರದ ಮೇಲೆ ಈ ಬಾರಿ ಮಾತ್ರ 2025-26 ನೇ ಸಾಲಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

1 ನೇ ತರಗತಿ ಪ್ರವೇಶಾತಿಗೆ ವಿದ್ಯಾರ್ಥಿಯ ವಯೋಮಿತಿ:

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ 2025-26 ನೇ ಸಾಲಿಗೆ ಒಂದನೇ ತರಗತಿಗೆ ಸೇರುವ ವಿದ್ಯಾರ್ಥಿಗೆ 2025ರ ಜೂನ್ 1ರೊಳಗೆ 5 ವರ್ಷ 5 ತಿಂಗಳು ಆಗಿದ್ದಲ್ಲಿ ವಿದ್ಯಾರ್ಥಿಯನ್ನು ಶಾಲೆಗೆ ಸೇರಿಸಿಕೊಳ್ಳಲಾಗುವುದು. ಮುಂದಿನ ವರ್ಷ ಈ ವಯೋಮಿತಿ ಸಡಿಲಿಕೆ ಇರುವುದಿಲ್ಲ

ಈ ಕುರಿತಂತೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಮುಂದಿನ ವರ್ಷ 2026-27 ನೇ ಸಾಲಿಗೆ ಈ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದಿಲ್ಲ ಹಾಗೂ ಕನಿಷ್ಠ 6 ವರ್ಷಗಳ ವಯಸ್ಸನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಒಂದನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಲು ನಿಗಧಿಪಡಿಸಿರುವ ವಯೋಮಿತಿಯನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಗೆ ಮಾತ್ರ ಸಡಿಲಿಕೆ ಮಾಡಲಾಗಿದೆ.

ಎಲ್.ಕೆ.ಜಿ ಮತ್ತು ಯು.ಕೆ.ಜಿ ವಿದ್ಯಾರ್ಥಿಯ ವಯೋಮಿತಿ

ಎಲ್.ಕೆ.ಜಿ ಪ್ರವೇಶಾತಿಗೆ 2025 ಜೂನ್ 1ನೇ ತಾರೀಖಿಗೆ ವಿದ್ಯಾರ್ಥಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

2025-2026ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.

Important Direct Links:

Official Websitekarnataka.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment