ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-2ಯನ್ನು ಏಪ್ರಿಲ್ 23 ರಿಂದ ಮೇ 8ರವರೆಗೆ ನಡೆಸಲಾಗಿತ್ತು. ಫಲಿತಾಂಶವನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಏ.23 ರಿಂದ ಮೇ 8 ರವರೆಗೆ ದ್ವಿತೀಯ ಪಿಯು ಪರೀಕ್ಷೆ-2 ಅನ್ನು ರಾಜ್ಯದ ವಿವಿಧ ಪರೀಕ್ಷೆ ನಡೆಸಲಾಗಿದೆ. ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅನುತ್ತೀರ್ಣರಾಗಿರುವ ಮತ್ತು ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಉಚಿತ ನೋಂದಣಿಯಾಗಿದ್ದರಿಂದ 2.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಸುಮಾರು 69 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆಯನ್ನು ತೆಗೆದುಕೊಂಡಿದ್ದರು.
2nd PUC Exam 2 Result Date 2025
ದ್ವಿತೀಯ ಪಿಯು ಪರೀಕ್ಷೆ-2 ಅನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದರು, ಪರೀಕ್ಷೆ -2 ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದ್ದು, ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮೇ 16 ರಂದು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟಿಸಿದೆ.
How to Check 2nd PUC Examination 2 Result Date 2025
ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ.
2025 ರ ದ್ವಿತೀಯ ಪಿಯುಸಿ ಪರೀಕ್ಷೆ – 2 ರ ಫಲಿತಾಂಶ ಪ್ರಕಟಣೆ / II PUC EXAM-2 RESULT 2025 ಪ್ರಕಟ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶ 2025 ಅನ್ನು ಸಲ್ಲಿಸಿ ಮತ್ತು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ/ಮುದ್ರಿಸಿ.