Karnataka 2nd PUC Exam 3 Result 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ – 3ರ ಫಲಿತಾಂಶಗಳನ್ನು ಇಂದು(ಜುಲೈ 16) ಬಿಡುಗಡೆಯಾಗಿದೆ. ಡೈರೆಕ್ಟ್ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ.
ಪೂರಕ ಪರೀಕ್ಷೆ -3 ಕ್ಕೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಕಾರ್ಯವು ಮುಗಿದಿದ್ದು ಮಂಡಳಿಯು ಫಲಿತಾಂಶವನ್ನು ಬಿಡುಗಡೆ ಮಾಡಲಿದೆ.
ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇದುವರೆಗೆ ಪರೀಕ್ಷಾ ಮಂಡಳಿಯು 3 ಪರೀಕ್ಷೆಗಳನ್ನು ನಡೆಸಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅಂಕವನ್ನು ಉತ್ತಮಗೊಳಿಸಿಕೊಳ್ಳಲು ಮತ್ತು ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಪರೀಕ್ಷಾ ಮಂಡಳಿಯು ನೀಡಿತ್ತು. ಅದರಂತೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3 ಅನ್ನು ಜೂನ್ 24 ರಿಂದ ಜುಲೈ 5, 2024 ರವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.
ಫಲಿತಾಂಶ ಪ್ರಕಟಗೊಂಡ ಬಳಿಕ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಫಲಿತಾಂಶದ ವಿವರಗಳನ್ನು ಪಡೆದುಕೊಳ್ಳಬಹುದು. ಪೂರಕ ಪರೀಕ್ಷೆಯ-3ರ ಫಲಿತಾಂಶವೂ www.kseab.karnataka.gov.in ಮತ್ತು www.karresults.nic.inನಲ್ಲಿ ಪ್ರಕಟಿಸಲಾಗುತ್ತದೆ. ಈ ಲೇಖನದಲ್ಲಿ ನಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3ರ ಫಲಿತಾಂಶಗಳನ್ನು ಆನ್ ಲೈನ್ ನಲ್ಲಿ ವೀಕ್ಷಿಸುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Check 2nd PUC Result 2024 Exam 3
- ಮೊದಲಿಗೆ ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಿಗೆ karnataka.gov.in, pue.kar.nic.in, karresults.nic.in, ಮತ್ತು kseeb.kar.nic.in. ಭೇಟಿ ನೀಡಿ.
- ನಂತರ ‘Results‘ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಿಮ್ಮ ನೊಂದಣಿ ಸಂಖ್ಯೆಯನ್ನು ಮತ್ತು ನೀವು ಆಯ್ಕೆ ಮಾಡಿಕೊಂಡ ವಿಷಯವನ್ನು(Select Subject) ಹಾಕಿ, ಮುಂದೆ Submit ಕ್ಲಿಕ್ ಮಾಡಿ.
- ಫಲಿತಾಂಶವು ನಿಮ್ಮ ಪರದೆ ಮೇಲೆ ಕಾಣಿಸಿಕೊಳ್ಳುತ್ತದ ಡೌನ್‌ಲೋಡ್ ಮಾಡಿಕೊಳ್ಳಿ.
Important Direct Links:
2nd PUC (EXAM 2) Result 2024 Direct Link (Live) | Check Here |
Official Website | kseab.karnataka |
More Updates | Karnataka Help.in |