2nd PUC Scanned Copy Application 2024: ನಿಮ್ಮ ಅಂಕಗಳಲ್ಲಿ ಗೊಂದಲವಿದ್ಯಾ? ಆಗಿದ್ರೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆದುಕೊಳ್ಳಿ! ಹೇಗೆ?

Published on:

ಫಾಲೋ ಮಾಡಿ
2nd PUC Scanned Copy Application 2024
2nd PUC Scanned Copy Application 2024

2nd PUC Scanned Copy Application 2024: ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ಫಲಿತಾಂಶವು ಈಗಾಗಲೇ ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಗೊಂದಲವಿದ್ದರೆ ಅಥವಾ ವಿದ್ಯಾರ್ಥಿಗಳು ಪಡೆದ ಅಂಕಗಳ ವಿಷಯದಲ್ಲಿ ಅಸಮಾಧಾನ ವಿದ್ದರೆ ಪರೀಕ್ಷೆ ಬರೆದ ಉತ್ತರ ಪ್ರತಿಗಳನ್ನು ಪಡೆಯಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಈ ಮೂಲಕ ವಿದ್ಯಾರ್ಥಿಗಳು ತಮ್ಮ ಉತ್ತರದ ಪ್ರತಿಗಳನ್ನು ಪಡೆದುಕೊಂಡು ಪರಿಶೀಲಿಸಬಹುದು ಹಾಗಾದರೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಅರ್ಜಿ ಶುಲ್ಕ ಎಷ್ಟು ಎಂಬುವುದನ್ನು ಈ ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂಕಗಳ ಬಗ್ಗೆ ಆಕ್ಷೇಪನೆ ಇದ್ದರೆ ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಫಿಯನ್ನು ಪಡೆದುಕೊಂಡು ಮರು ಮೌಲೀಕರಣ ಅಥವಾ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಬಹುದು. ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಕೆಯು ಈಗಾಗಲೇ ಶುರುವಾಗಿದ್ದು ಏಪ್ರಿಲ್ 16ಕ್ಕೆ ಕೊನೆಯ ದಿನಾಂಕ ವಾಗಿರುತ್ತದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಫಿಯನ್ನು ಏಪ್ರಿಲ್ 14ರಿಂದ 19ರವರೆಗೆ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ತಾವು ಪಡೆದ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನಾಂಕ ವಾಗಿರುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment