ತಲಾಟಿ ನೇಮಕಾತಿ ಪರೀಕ್ಷೆಗೆ 3.04 ಲಕ್ಷ ಅಭ್ಯರ್ಥಿಗಳು ಹಾಜರು..

Published on:

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕಂದಾಯ ಇಲಾಖೆಯ ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ(ತಲಾಟಿ) ಹುದ್ದೆಗಳ ನೇಮಕಾತಿಗೆ ಇಂದು(ಅ.10) ಸುಸೂತ್ರವಾಗಿ ಲಿಖಿತ ಪರೀಕ್ಷೆ ನಡೆಸಲಾಯಿತು.

ಧಾರವಾಡದಲ್ಲಿ ಅತಿ ಹೆಚ್ಚು ಅಂದರೆ 60 ಕೇಂದ್ರಗಳನ್ನೊಳಗೊಂಡಂತೆ ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಒಟ್ಟು 4,11,656 ಸ್ಪರ್ಧಾರ್ಥಿಗಳು ಪೈಕಿ, ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 (ಶೇ 74ರಷ್ಟು) ಹಾಜರಿದ್ದರು. ಮಧ್ಯಾಹ್ನ ನಡೆಸಲಾದ ನಿರ್ದಿಷ್ಟ ಪತ್ರಿಕೆಗೆ 3,03,058 ಸ್ಪರ್ಧಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದಾರೆ. ವೆಬ್ ಕಾಸ್ಟಿಂಗ್ ಮೂಲಕ ಎಲ್ಲೆಡೆ ಬಿಗಿ ನಿಗಾ ವ್ಯವಸ್ಥೆ ಮಾಡಲಾಗಿತ್ತು.

ಲಿಖಿತ ಪರೀಕ್ಷೆ ಕೂಡಲೇ, ಒಎಂಆರ್ ಉತ್ತರ ಪತ್ರಿಕೆಗಳು ತಲುಪಿದ ಕ್ಷಣದಿಂದಲೇ ಅವುಗಳನ್ನು ಸ್ಕ್ಯಾನ್ ಮಾಡಿ‌ ಕೆಇಎ ವೆಬ್‌ಸೈಟ್ನಲ್ಲಿ ಅಪ್ಲೋಡ್ ಮಾಡುವ ಕೆಲಸ‌ವನ್ನು ಆರಂಭಿಸಲಾಗಿದ್ದು, ಬೆಂಗಳೂರು, ಕಲ್ಬುರ್ಗಿ, ರಾಯಚೂರು, ಧಾರವಾಡ, ಬಳ್ಳಾರಿ, ವಿಜಯಪುರ, ದಾವಣಗೆರೆ ಮತ್ತು ‌ಮೈಸೂರಿನಲ್ಲಿ ಸ್ಕ್ಯಾನಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳ‌ ನೇತೃತ್ವದಲ್ಲಿ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ. ‌ನಾಳೆ(ಅ.05) ಸಂಜೆ ವೇಳೆಗೆ ಎಲ್ಲ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ಕೆಇಎ ವೆಬ್‌ಸೈಟ್ನಲ್ಲಿ ಲಭ್ಯವಾಗಲಿವೆ.

ಹೆಚ್.ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕರು, ಕೆಇಎ
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment