PMEGP Loan Scheme: ಯುವಕರಲ್ಲಿ ನಿರುದ್ಯೋಗತನವನ್ನು ಹೋಗಲಾಡಿಸಲು ಮತ್ತು ದೇಶದಲ್ಲಿ ಉದ್ಯೋಗ ಸೃಷ್ಟಿಗಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಯುವಕರಿಗಾಗಿ ಹೊಸ ಉದ್ಯಮ ಪ್ರಾರಂಭಿಸುವವರಿಗಾಗಿ ‘ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ’ (Pm Employment Generation Programme- PMEGP)ವನ್ನು ಜಾರಿ ಮಾಡಿದೆ.
ಈ ಮೂಲಕ ದೇಶದ ಯುವಜನರು ಉದ್ಯಮ ಆರಂಭಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೊಸ ಉದ್ಯಮಗಳನ್ನು ಪ್ರಾರಂಭಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆ ಉದ್ಯೋಗ ಸೃಷ್ಟಿಗೂ ಸಹಾಯವಾಗಲಿದೆ. ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮವು ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ ಬೃಹತ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ಉದ್ಯಮ ಆರಂಭಿಸಲು ಜನರನ್ನು ಉತ್ತೇಜಿಸಲು ಯುವ ಉದ್ಯಮಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೊಂದಾಯಿಸಿಕೊಂಡ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ನಿರುದ್ಯೋಗಿ ಯುವಕರು 10 ಲಕ್ಷದಿಂದ 25 ಲಕ್ಷ ರೂಪಾಯಿ ಬಂಡವಾಳದೊಂದಿಗೆ ಹೊಸ ಉದ್ಯಮ ಆರಂಭಿಸಬಹುದು. ಇದಕ್ಕಾಗಿ ಕೇಂದ್ರ ಸರ್ಕಾರವು ಸಾಲ ಸೌಲಭ್ಯಗಳನ್ನು ಸೌಲಭ್ಯಗಳನ್ನು ಒದಗಿಸಿಕೊಡಲಿದೆ.
ಅರ್ಜಿದಾರರು ಎಸ್‌ಸಿ, ಎಸ್‌ಟಿ, ಒಬಿಸಿ, ಮಹಿಳೆಯರು, ತೃತೀಯಲಿಂಗಿ, ದೈಹಿಕ ವಿಕಲಚೇತನರಾಗಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಯೋಜನೆಗಳಿಗೆ ಗರಿಷ್ಠ ಶೇ 35ರಷ್ಟು ಸಹಾಯಧನ ಸಿಗುತ್ತದೆ. ನಗರ ಪ್ರದೇಶಗಳಲ್ಲಿನ ಯೋಜನೆಗಳಿಗೆ ಶೇ 25ರಷ್ಟು ರಿಯಾಯಿತಿ ಸಿಗಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಘಟಕಕ್ಕೆ ಶೇ.25ರಷ್ಟು ಸಹಾಯಧನ ಹಾಗೂ ನಗರ ಪ್ರದೇಶದಲ್ಲಿ ಶೇ.15ರಷ್ಟು ಸಹಾಯಧನ ದೊರೆಯಲಿದೆ.
ಈ ಯೋಜನೆಗೆ ನೊಂದಾಯಿಸಿಕೊಳ್ಳಲು ಬಯಸುವ ಫಲಾನುಭವಿಗಳು PMEGPಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಹತ್ತಿರದ KVIC/KVIB ಅಥವಾ DIC ಕಚೇರಿಗಳಿಗೆ ಸಲ್ಲಿಸಬೇಕು. ನಂತರ ಹತ್ತಿರದ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆಯಬಹುದು.
ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದ ಮೂಲಕ ಉದ್ಯಮ ಆರಂಭಿಸಲು ಯುವಕರಿಗೆ ಸಹಕಾರ ನೀಡುತ್ತದೆ. ಈ ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
PMEGP Scheme Eligibility 2024
ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು;
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ಉತ್ತೀರ್ಣರಾಗಿರಬೇಕು.
- ಅರ್ಜಿ ಸಲ್ಲಿಸುವವರ ವಯೋಮಿತಿಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
- ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
- ಅರ್ಜಿದಾರರು ಈಗಾಗಲೇ ಸರ್ಕಾರದ ಯಾವುದಾದರು ಯೋಜನೆಯಿಂದ ಸಹಾಯಧನ. ತೆಗೆದುಕೊಂಡಿದ್ದರೆ, ಈ ಯೋಜನೆ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
- ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
PMEGP ಯೋಜನೆಯ ಉದ್ದೇಶ:
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ವಯಂ ಉದ್ಯೋಗ ಯೋಜನೆಗಳು/ಯೋಜನೆಗಳು/ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
PMEGP Loan Scheme 2024 Required Documents
PMEGP ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು;
- ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರದೊಂದಿಗೆ ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ
- ನಿಮ್ಮ ಉದ್ದೇಶಿತ ಘಟಕಕ್ಕಾಗಿ ಪ್ರಾಜೆಕ್ಟ್ ವರದಿ
- ಗುರುತಿನ ಚೀಟಿ, ನಿಮ್ಮ ವಿಳಾಸ, ಗುರುತಿನ ಬಗ್ಗೆ ಪುರಾವೆ
- PAN ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕೇಂದ್ರ ಸರ್ಕಾರ ನೀಡಿದ ತರಬೇತಿಗಾಗಿ ವಾಣಿಜ್ಯೋದ್ಯಮಿ ಅಭಿವೃದ್ಧಿ ಕಾರ್ಯಕ್ರಮ (EDP) ನೀಡಿದ ಪ್ರಮಾಣಪತ್ರ.
- ಬ್ಯಾಂಕ್ ಖಾತೆ ಪುಸ್ತಕ
Also Read: PM Vidya Lakshimi Yojana: ವಿದ್ಯಾಭ್ಯಾಸಕ್ಕಾಗಿ 15 ಲಕ್ಷದವರೆಗೂ ಸಾಲ ಸೌಲಭ್ಯ, ಇಲ್ಲಿದೆ ಹೆಚ್ಚಿನ ವಿವರ
Step by Step Process of PMEGP Scheme 2024 Online Application Registration
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ..?
- PMEGP ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://kviconline.gov.in/ ಕ್ಲಿಕ್ ಮಾಡುವ ಮೂಲಕ PMEGP ಪೋರ್ಟಲ್‌ಗೆ ಭೇಟಿ ನೀಡಬೇಕು.
- ನಂತರ PMEGP E ಪೋರ್ಟಲ್‌ನ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ನಂತರ ‘ಆನ್‌ಲೈನ್ ಅರ್ಜಿ ನಮೂನೆ’ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ಕೇಳಲಾಗುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
- ಎಲ್ಲ ಮಾಹಿತಿಯನ್ನು ಭರ್ತಿ ಮಾಡಿದ ನಂತರ, ಎಲ್ಲ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಬೇಕು.
ಅಂತಿಮವಾಗಿ ‘Submit’ ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. - ಅರ್ಜಿ ಸಲ್ಲಿಸಿದ ನಂತರ, ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಅದನ್ನು ಹತ್ತಿರದ KVIC/KVIB ಅಥವಾ DIC ಗೆ ಸಲ್ಲಿಸಬೇಕು.
- ನಂತರ ನೀವು ಪ್ರಾರಂಭಿಸುವ ಉದ್ಯಮದ ಕುರಿತು ಕೇಂದ್ರ ಸರ್ಕಾರದಿಂದ ಒಂದು ತಿಂಗಳ ತರಬೇತಿಯನ್ನು ನೀಡುತ್ತದೆ ತರಬೇತಿಯು ಕಡ್ಡಾಯವಾಗಿರುತ್ತದೆ.
Important Direct Links:
PMEGP Loan Scheme 2024 Online Application Registration Link | Apply Now |
Official Website | kviconline.gov.in |
More Updates | Karnataka Help.in |