HCL Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

Follow Us:

ಹಿಂದುಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ 2024- 25 ನೇ ಸಾಲಿನ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಐಟಿಐ ಮತ್ತು 10ನೇ ಪಾಸ್ ಮಾಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 195 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Hcl Apprentice Recruitment 2024
Hcl Apprentice Recruitment 2024

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಐಟಿಐ ಮತ್ತು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ಅಧಿಕೃತ ವೆಬ್ ಸೈಟ್ www.hindustancopper.com/ ಭೇಟಿ ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ HCL Apprentice Recruitment 2024 ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.

Shortview of HCL Apprentice Notification 2024

Organization Name – Hindustan Copper Limited.
Post Name – Apprentice
Total Vacancy – 195
Application Process: Online
Job Location – All Over India

ಪ್ರಮುಖ ದಿನಾಂಕಗಳು:

  • ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 1, 2024
  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 20, 2024
  • ಮೆರಿಟ್ ಲಿಸ್ಟ್ ಬಿಡುಗಡೆಯ ದಿನಾಂಕ – ಆಗಸ್ಟ್ 28, 2024

ಖಾಲಿ ಇರುವ ವಿವಿಧ ಟ್ರೇಡ್ ಗಳ ವಿವರ:

ಬ್ಲಾಸ್ಟರ್, ಡೀಸೆಲ್ ಮೆಕಾನಿಕ್, ಫಿಟ್ಟರ್, ಟರ್ನರ್, ವೆಲ್ಡರ್, ಎಲೆಕ್ಟ್ರಿಷಿಯನ್, ಡ್ರಾಫ್ಟ್ ಮ್ಯಾನ್ (ಮೆಕಾನಿಕಲ್, ಸಿವಿಲ್), ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ, ಸರ್ವೆಯರ್, ಕಾರ್ಪೆಂಟರ್, ಪ್ಲಂಬರ್ ಹೀಗೆ ವಿವಿಧ ಟ್ರೇಡ್ ಗಳಿಗೆ ಅಪ್ರೆಂಟಿಸ್ ತರಬೇತಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೆಲವೊಂದು ಟ್ರೇಡ್ ಗಳಿಗೆ 3 ವರ್ಷ ಮತ್ತು 1 ವರ್ಷಗಳ ಕಾಲ ತರಬೇತಿ ನೀಡಲಾಗುತ್ತದೆ.

ವಿದ್ಯಾರ್ಹತೆ:

ಈ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿಯ ಜೊತೆಗೆ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 25 ವರ್ಷಗಳ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ITI ಮತ್ತು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:

ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

Also Read: IBPS PO Notification 2024(OUT): ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 4455 ಹುದ್ದೆಗಳ ಬೃಹತ್ ಉದ್ಯೋಗಾವಕಾಶ

How to Apply for HCL(Hindustan Copper Ltd) Apprentice Recruitment 2024

ಅರ್ಜಿ ಸಲ್ಲಿಸುವ ಪ್ರಕ್ರಿಯೆ;

ಈ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಎರಡು ಹಂತಗಳನ್ನು ಅನುಸರಿಸಬೇಕು.

ಮೊದಲನೆಯ ಹಂತ

  • ಭಾರತ ಸರ್ಕಾರದ ಅಧಿಕೃತ ಅಪ್ರೆಂಟಿಸ್ ವೆಬ್ ಸೈಟ್ http://www.apprenticeship.gov.in ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ Search ವಿಭಾಗದಲ್ಲಿ ‘ಹಿಂದುಸ್ತಾನ್ ಕಾಪರ್ ಲಿಮಿಟೆಡ್’ ಹುಡುಕಿ.
  • ನಂತರ ಅಲ್ಲಿ ಕೇಳಲಾಗುವ ಎಲ್ಲ ಮಾಹಿತಿಯನ್ನು ಒದಗಿಸಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ನಿಮಗೆ ಅಪ್ರೆಂಟಿಸ್ ತರಬೇತಿಯ ನೋಂದಣಿ ಸಂಖ್ಯೆ ದೊರೆಯುತ್ತದೆ, ಅದನ್ನು ಉಳಿಸಿಕೊಳ್ಳಿ.

ಎರಡನೆಯ ಹಂತ

  • ಮೊದಲಿಗೆ ಹಿಂದುಸ್ತಾನ್ ಕಾಪರ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://www.hindustancopper.com/
  • ಮುಖಪುಟದಲ್ಲಿ ಕಾಣುವ “ನೇಮಕಾತಿ” ಅಥವಾ “ಅಪ್ರೆಂಟಿಸ್‌ಶಿಪ್” ವಿಭಾಗವನ್ನು ಹುಡುಕಿ.
  • ಕ್ಲಿಕ್ ಮಾಡಿದ ನಂತರ ಅಗತ್ಯವಿರುವ ಅರ್ಜಿ ನಮೂನೆಯ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ, ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
More UpdatesKarnataka Help.in

FAQs

How to Apply for Hindustan Copper Ltd Apprentice Recruitment 2024?

Visit the Official Website of www.hindustancopper.com to Apply Online

What is the Online Form Last Date of HCL Apprentice Vacancy 2024?

August 20, 2024

Leave a Comment