ಗದಗ ಜಿಲ್ಲೆಯ 5 ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಗದಗ ಜಿಲ್ಲೆಯ ಮುಂಡರಗಿ, ನರಗುಂದ, ಗದಗ, ರೋಣ, ಶಿರಹಟ್ಟಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 196 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತೆ. ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ 46 ಹುದ್ದೆಗಳು, ಅಂಗನವಾಡಿ ಸಹಾಯಕಿ 150 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಮಹಿಳೆಯರಲ್ಲಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಗದಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಬಯಸುತ್ತಿರುವ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಆಸಕ್ತ ಮತ್ತು ಅರ್ಹ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಸೆಪ್ಟಂಬರ್ 17, 2024 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ Gadag Anganwadi Recruitment 2024 ಕುರಿತು ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು ,
ಲೇಖನವನ್ನು ಕೊನೆವರೆಗೂ ಓದಿ.
Shortview of Gadag Anganwadi Notification 2024
Organization Name – Women & Child Development (WCD)
Post Name – Anganwadi Worker and Helper
Total Vacancy – 196
Application Process: Online
Job Location – Gadag
ಪ್ರಮುಖ ದಿನಾಂಕಗಳು:
- ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –17, ಆಗಸ್ಟ್ 2024
- ಅರ್ಜಿ ಸಲಿಸಲು ಕೊನೆಯ ದಿನಾಂಕ –17, ಸೆಪ್ಟೆಂಬರ್ 2024
ಮುಂಡರಗಿ ತಾಲ್ಲೂಕಿನ ಅಭ್ಯರ್ಥಿಗಳಿಗೆ;
- ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –20, ಆಗಸ್ಟ್ 2024
- ಅರ್ಜಿ ಸಲಿಸಲು ಕೊನೆಯ ದಿನಾಂಕ –19, ಸೆಪ್ಟೆಂಬರ್ 2024
ಖಾಲಿ ಇರುವ ಹುದ್ದೆಗಳ ವಿವರ:
ಗದಗನಲ್ಲಿ ಖಾಲಿ ಇರುವ ಹುದ್ದೆಗಳು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 05
- ಅಂಗನವಾಡಿ ಸಹಾಯಕಿ ಹುದ್ದೆಗಳು – 40
ಮುಂಡರಗಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 05
- ಅಂಗನವಾಡಿ ಸಹಾಯಕಿ ಹುದ್ದೆಗಳು – 24
ಶಿರಹಟ್ಟಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 21
- ಅಂಗನವಾಡಿ ಸಹಾಯಕಿ ಹುದ್ದೆಗಳು – 49
ರೋಣ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 10
- ಅಂಗನವಾಡಿ ಸಹಾಯಕಿ ಹುದ್ದೆಗಳು – 25
ನರಗುಂದ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 05
- ಅಂಗನವಾಡಿ ಸಹಾಯಕಿ ಹುದ್ದೆಗಳು – 12
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ – ಪಿಯುಸಿ ತೇರ್ಗಡೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ:
- ಮೆರಿಟ್ ಪಟ್ಟಿ
- ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
How to Apply for Gadag Anganwadi Recruitment 2024
ಅರ್ಜಿ ಸಲ್ಲಿಸುವ ವಿಧಾನ;
- ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ ಗೆ karnemakaone.kar.nic.in ಭೇಟಿ ನೀಡಿ
- ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
- ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.
Important Direct Links:
Official Notification PDF – Gadag | Download |
Official Notification PDF – Mundaragi | Download |
Official Notification PDF – Naragund | Download |
Official Notification PDF – Rona | Download |
Official Notification PDF – Shirahatti | Download |
Guidelines PDF | Download |
Online Application Form Link | Apply Link Here |
More Updates | Karnataka Help.in |