ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬೆಂಗಳೂರಿನ ತನ್ನ ಕೇಂದ್ರ ಕಚೇರಿಯಲ್ಲಿ ಖಾಲಿ ಇರುವ ರಾಜ್ಯ IAS ಕೋ ಆರ್ಡಿನೇಟರ್ ಮತ್ತು ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನಿಗದಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024ಕ್ಕೆ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ ಸೈಟ್ https://swachhamevajavate.org ನಲ್ಲಿ ರಜೆಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ RDWSD Karnataka Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of RDWSD KSRWSP Karnataka Notification 2024
Organization Name – Rural Drinking Water and Sanitation Department
Post Name – State ISA Co-Ordinator and State Water Quality Co-Ordinator
Application Process: Online
Job Location – Bengaluru
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 10, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 23, 2024
ವಿದ್ಯಾರ್ಹತೆ:
ರಾಜ್ಯ IAS ಕೋ ಆರ್ಡಿನೇಟರ್(State ISA Co-Ordinator) ಹುದ್ದೆಗೆ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ/ MSW/ಗ್ರಾಮೀಣಾಭಿವೃದ್ಧಿ/ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರಬೇಕು
- ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷಗಳ ಅನುಭವ ಮತ್ತು ನೀರು, ನೈರ್ಮಲ್ಯ ಮತ್ತು ಗ್ರಾಮೀಣ ಅಭಿವೃದ್ಧಿಯಲ್ಲಿ ಅಭಿವೃದ್ಧಿ ವಲಯದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.
ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್(State Water Quality Co-Ordinator) ಹುದ್ದೆಗೆ – ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ರಸಾಯನಶಾಸ್ತ್ರ / ಜೀವರಸಾಯನಶಾಸ್ತ್ರ / ಜೈವಿಕ ತಂತ್ರಜ್ಞಾನ / ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಮಾತ್ರ ಅರ್ಜಿ ಸಲ್ಲಿಸಬಹುದು.
- NABL ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಕನಿಷ್ಠ 3 ವರ್ಷಗಳ ತಾಂತ್ರಿಕ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಣೆ ಮತ್ತು ನೀರಿನ ಗುಣಮಟ್ಟ ವಿಶ್ಲೇಷಣೆಯಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು.
ವಯಸ್ಸಿನ ಮಿತಿ:
ಈ ಅಧಿಸೂಚನೆಯ ಪ್ರಾಕರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 (ಐವತ್ತು) ವರ್ಷಗಳಿಗಿಂತ ಹೆಚ್ಚಿರಬಾರದು.
ವೇತನ ಶ್ರೇಣಿ:
ರಾಜ್ಯ IAS ಕೋ ಆರ್ಡಿನೇಟರ್ ಹುದ್ದೆಗೆ – ಮಾಸಿಕವಾಗಿ ₹1,00,000 ರಿಂದ 1,25,000/- ನೀಡಲಾಗುತ್ತದೆ.
ರಾಜ್ಯ ನೀರು ಗುಣಮಟ್ಟದ ಕೋ ಆರ್ಡಿನೇಟರ್ ಹುದ್ದೆಗೆ – ಮಾಸಿಕವಾಗಿ ₹75,000 ರಿಂದ ₹1,00,000 ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಗಳಿಸದ ಅಂಕಗಳು ಮತ್ತು ಕಾರ್ಯನುಭವದ ಮೇಲೆ ಶಾರ್ಟ್ಲಿಸ್ಟ್ ಮಾಡಿ, ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
How to Apply for RDWSD Karnataka Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ…?
- ಮೊದಲಿಗೆ RDWSD ಅಧಿಕೃತ ವೆಬ್ ಸೈಟ್ https://swachhamevajavate.org ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ Latest Jobs ಮೇಲೆ ಕ್ಲಿಕ್ ಮಾಡಿ
- ನಂತರ State ISA Co-Ordinator ಮತ್ತು State Water Quality Co-Ordinator ಹುದ್ದೆಗಳ ಲಿಂಕ್ ಹುಡುಕಿ
- ನೇಮಕಾತಿಯ ಮುಂದೆ ನೀಡಲಾಗಿರುವ Apply Now ಲಿಂಕ್ ಕ್ಲಿಕ್ ಮಾಡಿ.
- ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ದ್ವೀಪಗಳು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ – 080-22533700ಕ್ಕೆ ಸಂಪರ್ಕ ಮಾಡಬಹುದು.
Important Direct Links:
Official Notification PDF | Download |
Online Application Form Link | Apply Here |
Official Website | swachhamevajayate.org |
More Updates | Karnataka Help.in |