WhatsApp Channel Join Now
Telegram Group Join Now

BMTC Score List 2024(OUT): BMTC ಕಂಡಕ್ಟರ್ (RPC) ತಾತ್ಕಾಲಿಕ ಸ್ಕೋರ್ ಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ BMTC ಸಂಸ್ಥೆಯಲ್ಲಿನ ನಿರ್ವಾಹಕರು-ಉಳಿಕೆ ಮೂಲ ವೃಂದ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ವಿವರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಂಕಪಟ್ಟಿಯ ವಿವರಗಳನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಿರ್ವಾಹಕರ ಹುದ್ದೆಗೆ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯನ್ನು ಸೆಪ್ಟಂಬರ್ 1 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.  ಈ ಪರೀಕ್ಷೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ, ಕೀ ಉತ್ತರಗಳ ಮೇಲೆನ ಆಕ್ಷೇಪಣೆಗಳನ್ನು  ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಿಂಕ್ ಮೂಲಕ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 18 ಸಂಜೆ 5.30 ರೊಳಗೆ ಪೂರಕ ದಾಖಲೆಗಳೊಂದಿಗೆ ಅಂಚೆ ಮೂಲಕ /ಖುದ್ದಾಗಿ ಸಲ್ಲಿಸಬಹುದಾಗಿದೆ.

ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯ ವಿವರಗಳನ್ನು ಪಡೆದುಕೊಳ್ಳಲು KEA ಅಧಿಕೃತ ವೆಬ್ ಸೈಟ್ https://cetonline.karnataka.gov.in/kea ಭೇಟಿ ನೀಡುವ ಮೂಲಕ ತಾತ್ಕಾಲಿಕ ಅಂಕಪಟ್ಟಿಯನ್ನು ಪಡೆದುಕೊಳ್ಳಬಹುದು.

Bmtc Conductor Score List 2024
Bmtc Conductor Score List 2024

ಅಂಕ ವಿವರಗಳ ಮೇಲೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 18 ಸಂಜೆ 5:30ರ ಒಳಗೆ.

How to Download BMTC Provisional Score List 2024

ಆನ್ ಲೈನ್ ಮೂಲಕ ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡುವುದು ಹೇಗೆ…?

  • ಮೊದಲಿಗೆ KEA ಅಧಿಕೃತ ವೆಬ್ ಸೈಟ್  https://cetonline.karnataka.gov.in/kea ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣುವ “ನೇಮಕಾತಿಯ” ಮೇಲೆ ಕ್ಲಿಕ್ ಮಾಡಿ.
  • ನಂತರ BMTC ನೇಮಕಾತಿ 2024ರ ಮೇಲೆ ಆಯ್ಕೆ ಮಾಡಿ.
  • “BMTC ಕಂಡಕ್ಟರ್ (RPC) ತಾತ್ಕಾಲಿಕ ಸ್ಕೋರ್” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ತಾತ್ಕಾಲಿಕ ಅಂಕಪಟ್ಟಿವು ನಿಮ್ಮ ಫೋನ್ ಪರದೆಯ ಮೇಲೆ ಕಾಣಿಸಿಕೊಳ್ಳುತ್ತೇದೆ.

Important Direct Links:

BMTC Conductor (RPC) Provisional Score List 2024 Notice PDFDownload
BMTC (RPC) Provisional Score List 2024 Check LinkCheck Here
Official WebsiteKea.Kar.Nic.In
More UpdatesKarnataka Help.in

1 thought on “BMTC Score List 2024(OUT): BMTC ಕಂಡಕ್ಟರ್ (RPC) ತಾತ್ಕಾಲಿಕ ಸ್ಕೋರ್ ಪಟ್ಟಿ ಬಿಡುಗಡೆ”

Leave a Comment