“ಆಹಾರ ವಾಹಿನಿ”ಯಡಿ ₹3 ಲಕ್ಷ ಸಹಾಯಧನ; ಅರ್ಜಿ ಆಹ್ವಾನ

Published on:

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಒಕ್ಕಲಿಗ ಅಥವಾ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ಸರ್ಕಾರ ಸದರಿ ಯೋಜನೆಯಡಿ ನಾಲ್ಕು ಚಕ್ರಗಳ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ಇವಿ-ಗೂಡ್ಸ್ ವಾಹನಗಳ ಖರೀದಿಗೆ 3 ಲಕ್ಷರೂ.ವರೆಗೆ ಸಹಾಯಧನ ನೀಡುತ್ತಿದೆ. ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಹೊಂದಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ನಿಗದಿತ ಕೊನೆಯ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್‌ https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಫೆಬ್ರವರಿ 05
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಫೆಬ್ರವರಿ 05
  • ಒಕ್ಕಲಿಕ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 06
  • ವೀರಶೈವ ಲಿಂಗಾಯತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆ ದಿನ – ಮಾರ್ಚ್‌ 08

ಆಹಾರವಾಹಿನಿ ಯೋಜನೆಯ ವಿವರ:

ಸರ್ಕಾರವು ಆಹಾರವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ಒಳಗೊಂಡ ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ ಹಾಗೂ ವಾಹನ ಖರೀದಿಗೆ 3ಲಕ್ಷರೂ. ಸಹಾಯಧನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಉಳಿಕೆ ಮೊತ್ತವನ್ನು ಬ್ಯಾಂಕುಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:

• ಅಭ್ಯರ್ಥಿಗಳು ಒಕ್ಕಲಿಗ ಸಮುದಾಯದ (ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (Gowda)/ಗೌಡ (Gouda), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ) ಜನಾಂಗಕ್ಕೆ ಸೇರಿದವರಾಗಿರಬೇಕು.

ಅಥವಾ

• ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ (ಪ್ರವರ್ಗ-IIIಬಿ) ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

• ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ 3ಲಕ್ಷರೂ. ಮಿತಿಯೊಳಗಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು

ಒಕ್ಕಲಿಗ ಸಮುದಾಯ: ಯೋಜನೆ ಲಭ್ಯವಿರುವ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳು:

• ಬೆಂಗಳೂರು ನಗರ ಪ್ರದೇಶದ ವಿಧಾನ ಸಭಾ ಕ್ಷೇತ್ರಗಳಾದ ಯಲಹಂಕ, ಬ್ಯಾಟರಾಯನಪುರ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಗಾಂಧಿನಗರ, ಕೆ.ಆ‌ರ್.ಪುರ, ಮಹದೇವಪುರ, ಪುಲಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್ ನಗರ, ಶಾಂತಿನಗರ, ದಾಸರಹಳ್ಳಿ, ಬಸವನಗುಡಿ, ಪದ್ಮನಾಭನಗರ, ಬಿ.ಟಿ.ಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ

• ಬೆಂಗಳೂರು ದಕ್ಷಿಣ, ಆನೇಕಲ್, ಗೋವಿಂದರಾಜನಗರ, ವಿಜಯನಗರ, ಚಾಮರಾಜಪೇಟೆ, ಚಿಕ್ಕಪೇಟೆ, ರಾಜರಾಜೇಶ್ವರಿನಗರ, ಶಿವಾಜಿನಗರ, ಯಶವಂತಪುರ, ರಾಜಾಜಿನಗರ

• ಕನಕಪುರ, ಶಿವಮೊಗ್ಗ ನಗರ, ತುಮಕೂರು ನಗರ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಉತ್ತರ, ಕೃಷ್ಣರಾಜ, ಚಾಮರಾಜ, ನರಸಿಂಹರಾಜ, ಮಂಡ್ಯ, ಚಾಮರಾಜನಗರ, ಉಡುಪಿ, ಮಂಗಳೂರು ನಗರ ಉತ್ತರ, ಮಂಗಳೂರು ನಗರ ದಕ್ಷಿಣ

• ಹಾಸನ, ಚಿಕ್ಕಮಗಳೂರು, ಮಡಿಕೇರಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬಾಗಲಕೋಟೆ, ಬಿಜಾಪುರ ನಗರ, ಗದಗ, ಹುಬ್ಬಳ್ಳಿ ಧಾ।-ಪೂರ್ವ, ಕಾರವಾರ, ಹಾವೇರಿ, ಗುಲ್ಬರ್ಗಾ ದಕ್ಷಿಣ, ಯಾದಗಿರಿ, ಬಳ್ಳಾರಿ ನಗರ, ಬೀದರ್, ರಾಯಚೂರು, ಕೊಪ್ಪಳ, ವಿಜಯನಗರ

ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:

ಅರ್ಜಿದಾರರ ಮಾನ್ಯವಾದ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ
ಅರ್ಜಿದಾರರ ಪಾಸ್‌ಪೋರ್ಟ್ ಅಳತೆಯ ಭಾವ ಚಿತ್ರ
ಆಧಾರ್ ಕಾರ್ಡ್ ಪ್ರತಿ
ಬ್ಯಾಂಕ್ ಪಾಸ್ ಬುಕ್
ಡ್ರೈವಿಂಗ್ ಲೈಸೆನ್ಸ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇತ್ಯಾದಿ…

ಆಯ್ಕೆ ವಿಧಾನ:

ಸದರಿ ಯೋಜನೆಯಡಿ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ.

ಅರ್ಜಿ ಸಲ್ಲಿಕೆ ಹೇಗೆ ?

ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು.

• ಸೇವಾ ಸಿಂಧು ಅಧಿಕೃತ ಜಾಲತಾಣ https://sevasindhuservices.karnataka.gov.in/ ಕ್ಕೆ ಭೇಟಿ ನೀಡಿ.

• ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ನಂತರ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ದೂರವಾಣಿ ಸಂಖ್ಯೆ 080-29904350, 29904268 ಅನ್ನು ಅಥವಾ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ದೂರವಾಣಿ ಸಂಖ್ಯೆ 080-22865522ಗೆ ಸಂಪರ್ಕಿಸಬಹುದು.

Important Direct Links:

Online Application Form Linksevasindhuservices.karnataka.gov.in
KVCDC Official Websitekvcdc.karnataka.gov.in
KVLDCL Official Websitekvldcl.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

5 thoughts on ““ಆಹಾರ ವಾಹಿನಿ”ಯಡಿ ₹3 ಲಕ್ಷ ಸಹಾಯಧನ; ಅರ್ಜಿ ಆಹ್ವಾನ”

Leave a Comment