ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (Airports Authority of India) ಅಕ್ಟೋಬರ್ 2025 ರ ಅಧಿಸೂಚನೆಯ ಮೂಲಕ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಸಾರ್ವಜನಿಕ ವಲಯದ ಸಂಸ್ಥೆಯು ಭಾರತದಲ್ಲಿ ನಾಗರಿಕ ವಿಮಾನಯಾನ ಮೂಲಸೌಕರ್ಯವನ್ನು ರಚಿಸುವುದು, ಮೇಲ್ದರ್ಜೆಗೇರಿಸುವುದು ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಈ ಸಂಸ್ಥೆಯಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬಹುದು.
ನೇಮಕಾತಿಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 03, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 16, 2025
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಬಿಇ ಅಥವಾ ಬಿ. ಟೆಕ್ ಅನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ವಿವರ:
- ಕನ್ಸಲ್ಟೆಂಟ್ – 1
- ಜೂನಿಯರ್ ಕನ್ಸಲ್ಟೆಂಟ್ – 2
ವಯೋಮಿತಿ:
- ಕನ್ಸಲ್ಟೆಂಟ್ – ಗರಿಷ್ಟ 40 ವರ್ಷಗಳು
- ಜೂನಿಯರ್ ಕನ್ಸಲ್ಟೆಂಟ್ – ಗರಿಷ್ಟ 35 ವರ್ಷಗಳು
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವಯೋಮಿತಿ ಸಡಿಲಿಕೆ ಕುರಿತಂತೆ ಯಾವುದೇ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಿರುವುದಿಲ್ಲ.
ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವು ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
- ಅರ್ಹತೆ ಪರಿಶೀಲನೆ
- ಅನುಭವ ಪರಿಶೀಲನೆ
- ದಾಖಲೆಗಳ ಪರಿಶೀಲನೆ
- ಸಂದರ್ಶನ
ವೇತನ:
- ಕನ್ಸಲ್ಟೆಂಟ್ – ಮಾಸಿಕ ರೂ.120000/-
- ಜೂನಿಯರ್ ಕನ್ಸಲ್ಟೆಂಟ್ – ಮಾಸಿಕ ರೂ.100000/-
ಅರ್ಜಿ ಸಲ್ಲಿಸುವುದು ಹೇಗೆ ?
- ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
- ಕೆಳಗೆ ನೀಡಿರುವ ಅರ್ಜಿ ಲಿಂಕನ್ನು ಕ್ಲಿಕ್ ಮಾಡಿ ಮತ್ತು ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ನೀಡಿ ರಿಜಿಸ್ಟರ್ ಮಾಡಿಕೊಳ್ಳಿ.
- ನಂತರ ಲಾಗಿನ್ ಮಾಡಿಕೊಂಡು ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ತುಂಬಿ, ಹಾಗೆಯೇ ಎಲ್ಲಾ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಮುಂದಿನ ಹಂತಕ್ಕೆ ಹೋಗಿ.
- ನಂತರ ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಿಕೊಂಡು ಪ್ರಿಂಟ್ ತೆಗೆದುಕೊಳ್ಳಿ. ಅರ್ಜಿಯನ್ನು Submit ಮಾಡಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ.
Important Direct Links:
| Official Notification PDF | Download |
| Online Application Link | Apply Now |
| Official Website | https://aai.aero/ |
| More Updates | KarnatakaHelp.in |
I don’t know
Devamma job
Sir giving me this opportunity please sir middle class family sir 🙏