ವಿಜಯನಗರ ಜಿಲ್ಲೆಯ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.
ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಆಫೀಸರ್, ಗುಮಾಸ್ತ ಹಾಗೂ ಅಟೆಂಡರ್/ಜವಾನ ಸೇರಿದಂತೆ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ https://adarshabank.com/ನಲ್ಲಿ ಇರುವ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಡಿ.18ರೊಳಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಡಿಸೆಂಬರ್ 05, 2025
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025
ಹುದ್ದೆಗಳ ವಿವರ:
ಕಾರ್ಯನಿರ್ವಹಣಾಧಿಕಾರಿ (C.E.O) – 01 ಹುದ್ದೆ
ಆಫೀಸರ್ – 01 ಹುದ್ದೆ
ಗುಮಾಸ್ತ – 02 ಹುದ್ದೆಗಳು
ಅಟೆಂಡರ್/ಜವಾನ – 02 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
✓ ಕಾರ್ಯನಿರ್ವಹಣಾಧಿಕಾರಿ (C.E.O) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಮತ್ತು ಯಾವುದೇ ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್. ಸಹಕಾರಿ ಬ್ಯಾಂಕ್ ಅಥವಾ ಶೆಡ್ಯೂಲ್ಡ್ ಬ್ಯಾಂಕ್ನಲ್ಲಿ ವ್ಯವಸ್ಥಾಪಕರಾಗಿ ಅಥವಾ ಆಫೀಸರ್ ಆಗಿ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು.
✓ ಆಫೀಸರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಥವಾ ಯಾವುದೇ ಹಣಕಾಸು ಸಂಸ್ಥೆಗಳಲ್ಲಿ ಕನಿಷ್ಠ 02 ವರ್ಷ ಸೇವೆ ಸಲ್ಲಿಸಿದವರಿಗೆ ಮೊದಲು ಆದ್ಯತೆ ನೀಡಲಾಗುವುದು ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯವಾಗಿ ಹೊಂದಿರಬೇಕು.
✓ ಗುಮಾಸ್ತ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪದವೀಧರರಾಗಿರಬೇಕು. ಹಣಕಾಸು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದವರಿಗೆ ಮೊದಲು ಆದ್ಯತೆ ನೀಡಲಾಗುವುದು ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯವಾಗಿ ಹೊಂದಿರಬೇಕು.
✓ ಅಟೆಂಡರ್/ಜವಾನ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯಸ್ಸಿನ ಮಿತಿ:
✓ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ – ಗರಿಷ್ಠ ವಯಸ್ಸಿನ ಮಿತಿ – 65 ವರ್ಷಗಳು
✓ ಆಫೀಸರ್ ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 26 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
✓ ಗುಮಾಸ್ತರು ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
✓ ಅಟೆಂಡರ್/ಜವಾನ ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು
ಆಯ್ಕೆ ವಿಧಾನ:
ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಬಳ:
ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 200ರೂ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು ಮೊದಲಿಗೆ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಅಧಿಕೃತ ಜಾಲತಾಣ https://adarshabank.com/ಕ್ಕೆ ಭೇಟಿ ನೀಡಿ.
• ನಂತರ ಸುದ್ದಿ ಮತ್ತು ಪ್ರಕಟಣೆಗಳು ವಿಭಾಗದ ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.
• ಅರ್ಜಿ ನಮೂನೆ ಡೌನ್ಲೋಡ್ ಮಾಡುವ ನೇರ ಲಿಂಕ್ – https://adarshabank.com/documnents/AdarshabankExamAdvertisement.pdf ಅಥವಾ ಇಲ್ಲಿ ಕ್ಲಿಕ್ ಮಾಡಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯೊಂದಿಗೆ (ಅರ್ಜಿ ಶುಲ್ಕ) 200ರೂ. ಡಿ.ಡಿ. ಯನ್ನು ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ, ಹೆಸರಿನಲ್ಲಿ ಬ್ಯಾಂಕಿಗೆ ಒದಗಿಸಿ ಸ್ವೀಕೃತಿ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ಸಂಖ್ಯೆ – 9880012966 ಅನ್ನು ಸಂಪರ್ಕಿಸಬಹುದು.
Important Direct Links:
| Official Short Notification PDF | Download |
| Application Form PDF | Download |
| Official Website | adarshabank.com |
| More Updates | KarnatakaHelp.in |



