ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ CEO, ಆಫೀಸರ್, ಗುಮಾಸ್ತ, ಅಟೆಂಡರ್ ಹುದ್ದೆಗಳ ಭರ್ತಿ

ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ

Published on:

ವಿಜಯನಗರ ಜಿಲ್ಲೆಯ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.

ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಆಫೀಸರ್, ಗುಮಾಸ್ತ ಹಾಗೂ ಅಟೆಂಡರ್/ಜವಾನ ಸೇರಿದಂತೆ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ https://adarshabank.com/ನಲ್ಲಿ ಇರುವ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಡಿ.18ರೊಳಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಡಿಸೆಂಬರ್ 05, 2025
  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025

ಹುದ್ದೆಗಳ ವಿವರ:

ಕಾರ್ಯನಿರ್ವಹಣಾಧಿಕಾರಿ (C.E.O) – 01 ಹುದ್ದೆ
ಆಫೀಸರ್ – 01 ಹುದ್ದೆ
ಗುಮಾಸ್ತ – 02 ಹುದ್ದೆಗಳು
ಅಟೆಂಡರ್/ಜವಾನ – 02 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

✓ ಕಾರ್ಯನಿರ್ವಹಣಾಧಿಕಾರಿ (C.E.O) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಮತ್ತು ಯಾವುದೇ ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್. ಸಹಕಾರಿ ಬ್ಯಾಂಕ್ ಅಥವಾ ಶೆಡ್ಯೂಲ್ಡ್ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿ ಅಥವಾ ಆಫೀಸರ್ ಆಗಿ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು.

✓ ಆಫೀಸರ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಥವಾ ಯಾವುದೇ ಹಣಕಾಸು ಸಂಸ್ಥೆಗಳಲ್ಲಿ ಕನಿಷ್ಠ 02 ವರ್ಷ ಸೇವೆ ಸಲ್ಲಿಸಿದವರಿಗೆ ಮೊದಲು ಆದ್ಯತೆ ನೀಡಲಾಗುವುದು ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯವಾಗಿ ಹೊಂದಿರಬೇಕು.

✓ ಗುಮಾಸ್ತ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪದವೀಧರರಾಗಿರಬೇಕು. ಹಣಕಾಸು ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದವರಿಗೆ ಮೊದಲು ಆದ್ಯತೆ ನೀಡಲಾಗುವುದು ಜೊತೆಗೆ ಕಂಪ್ಯೂಟರ್ ಜ್ಞಾನ ಅವಶ್ಯವಾಗಿ ಹೊಂದಿರಬೇಕು.

✓ ಅಟೆಂಡರ್/ಜವಾನ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯಸ್ಸಿನ ಮಿತಿ:

✓ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ – ಗರಿಷ್ಠ ವಯಸ್ಸಿನ ಮಿತಿ – 65 ವರ್ಷಗಳು

✓ ಆಫೀಸರ್ ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 26 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

✓ ಗುಮಾಸ್ತರು ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು

✓ ಅಟೆಂಡರ್/ಜವಾನ ಹುದ್ದೆಗೆ – ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು

ಆಯ್ಕೆ ವಿಧಾನ:

ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಸಂಬಳ:

ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಗಳ ಪ್ರಕಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 200ರೂ.

ಅರ್ಜಿ ಸಲ್ಲಿಸುವ ವಿಧಾನ

• ಅಭ್ಯರ್ಥಿಗಳು ಮೊದಲಿಗೆ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಅಧಿಕೃತ ಜಾಲತಾಣ https://adarshabank.com/ಕ್ಕೆ ಭೇಟಿ ನೀಡಿ.

• ನಂತರ ಸುದ್ದಿ ಮತ್ತು ಪ್ರಕಟಣೆಗಳು ವಿಭಾಗದ ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.

• ಅರ್ಜಿ ನಮೂನೆ ಡೌನ್ಲೋಡ್ ಮಾಡುವ ನೇರ ಲಿಂಕ್ – https://adarshabank.com/documnents/AdarshabankExamAdvertisement.pdf ಅಥವಾ ಇಲ್ಲಿ ಕ್ಲಿಕ್‌ ಮಾಡಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ, ಭಾವಚಿತ್ರ, ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯೊಂದಿಗೆ (ಅರ್ಜಿ ಶುಲ್ಕ) 200ರೂ. ಡಿ.ಡಿ. ಯನ್ನು ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ, ಹೆಸರಿನಲ್ಲಿ ಬ್ಯಾಂಕಿಗೆ ಒದಗಿಸಿ ಸ್ವೀಕೃತಿ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ಸಂಖ್ಯೆ – 9880012966 ಅನ್ನು ಸಂಪರ್ಕಿಸಬಹುದು.

Important Direct Links:

Official Short Notification PDFDownload
Application Form PDFDownload
Official Websiteadarshabank.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment