Adijambava Development Corporation Loan Schemes Online Form 2025
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರವು ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಐ.ಎಸ್.ಬಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ sevasindhu.karnataka.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
• ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು.
• ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಆದಿ ಕರ್ನಾಟಕ, ಆದಿ ಅಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
• ಅರ್ಜಿದಾರರು/ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
• ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು:
→ ಭಾವಚಿತ್ರ → ಜಾತಿ ಪ್ರಮಾಣ ಪತ್ರ → ಆಧಾಯ ಪ್ರಮಾಣ ಪತ್ರ → ಆಧಾರ್ ಕಾರ್ಡ್ → ಬ್ಯಾಂಕ್ ಪಾಸ್ಬುಕ್
ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಗಳಿಗೆ ಸಂಬಂಧಿಸಿದ ಇತರೆ ದಾಖಲಾತಿಗಳು
How to Apply for Adijambava Development Corporation Loan Scheme 2025-26
ಅರ್ಜಿ ಸಲ್ಲಿಸುವ ವಿಧಾನ;
ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ.
ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Adijambava Development Corporation Loan Schemes Online Form 2025 Link