ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆ (AFCAT) ಮತ್ತು ಎನ್ಸಿಸಿ ವಿಶೇಷ ಪ್ರವೇಶಕ್ಕಾಗಿ ಭಾರತೀಯ ವಾಯುಪಡೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನ.10 ಪ್ರಾರಂಭವಾಗಲಿದೆ.
ವಾಯುಪಡೆಯ ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ ಶಾಖೆಯಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ SSC ಅಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಯುಪಡೆ ವಿಭಾಗದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್ ಸೈಟ್ https://afcat.cdac.in/AFCAT/ಗೆ ಭೇಟಿ ನೀಡಿ. ಡಿ.9ರೊಳಗೆ ಆನ್ಲೈನ್ ಮೂಲಕ ನೊಂದಾಯಿಸಿ, ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
✓ ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಮಟ್ಟದಲ್ಲಿ ಗಣಿತ ಮತ್ತು ಭೌತಶಾಸ್ತ್ರದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
✓ ಗ್ರೌಂಡ್ ಡ್ಯೂಟಿ ಶಾಖೆ ( ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಮಟ್ಟದಲ್ಲಿ ಗಣಿತ ಮತ್ತು ಭೌತಶಾಸ್ತ್ರದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ತಾಂತ್ರಿಕ ಅಥವಾ ತಾಂತ್ರಿಕೇತರ ವಿಭಾಗಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
✓ ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 24 ವರ್ಷಗಳು
✓ ಗ್ರೌಂಡ್ ಡ್ಯೂಟಿ ಶಾಖೆ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 26 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ವಾಯುಪಡೆ ಆಯ್ಕೆ ಮಂಡಳಿ (AFSB) ಪರೀಕ್ಷೆ ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆ
ಸಂಬಳ:
ಅಭ್ಯರ್ಥಿಗಳಿಗೆ ಮಾಸಿಕ 56,100 – 1,77,500ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 500ರೂ. + GST
ಅರ್ಜಿ ಸಲ್ಲಿಸುವ ವಿಧಾನ
• ವಾಯುಪಡೆಯ ಅಧಿಕೃತ ವೆಬ್ ಸೈಟ್ https://afcat.cdac.in/AFCAT/ಗೆ ಭೇಟಿ ನೀಡಿ.
• ನವೆಂಬರ್ 10ರಂದು ಸಕ್ರಿಯವಾಗುವ “ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆ (AFCAT)-01/2026/ NCC ವಿಶೇಷ ಪ್ರವೇಶ” ನೋಂದಣಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಇ-ಮೇಲ್ ಐಡಿ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
• ಬಳಿಕ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.