ಭಾರತೀಯ ವಾಯುಸೇನೆ ದೇಶದ ಯುವಕರಿಗೆ ಅದ್ಭುತ ಅವಕಾಶವನ್ನು ನೀಡುತ್ತಿದ್ದು, 2024ನೇ ಸಾಲಿನ ಅಗ್ನಿವೀರ್ ನಾನ್-ಕಾಂಬ್ಯಾಟ್ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಭಾರತೀಯ ವಾಯುಸೇನೆಯು ಅಗ್ನಿವೀರ್ ಯೋಜನೆಯ ಅಡಿಯಲ್ಲಿ ನಾನ್-ಕಾಂಬ್ಯಾಟ್ ಹಾಸ್ಪಿಟಾಲಿಟಿ ಮತ್ತು ಹೌಸ್ ಕೀಪಿಂಗ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾದ ಎಲ್ಲಾ ದೈಹಿಕ ಮಾನದಂಡಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. SSLC ಪಾಸ್ ಮಾಡಿರುವ ಅಭ್ಯರ್ಥಿಗಳು ಅಗ್ನಿಪೀರ್ ಯೋಜನೆಯ ಅಡಿಯಲ್ಲಿ ಕೆಲಸದ ಜೊತೆಗೆ ದೇಶಕ್ಕೆ ಸೇವೆಯನ್ನು ಸಲ್ಲಿಸಬಹುದಾಗಿದೆ. ಯೋಜನೆಯಲ್ಲಿ ಒಟ್ಟು ನಾಲ್ಕು ವರ್ಷಗಳ ಕಾಲ ವಾಯು ಸೇನೆಯಲ್ಲಿ ಕೆಲಸ ನಿರ್ವಹಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಭಾರತೀಯ ವಾಯುಪಡೆಯ ಅಧಿಕೃತ ವೆಬ್ ಸೈಟ್ https://agnipathvayu.cdac.in/AV/ ನಲ್ಲಿ ಅರ್ಜಿ ನಮೂನೆಗಳನ್ನು ಡೌನ್ ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳೊಂದಿಗೆ ನಿಗದಿತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಕಳುಹಿಸಬೇಕಾದ ಪೋಸ್ಟ್ ವಿಳಾಸವನ್ನು ಅಧಿಸೂಚನೆಯಲ್ಲಿ ಪ್ರತಿಯೊಂದು ಪ್ರದೇಶಕ್ಕೂ ಅನುಗುಣವಾಗಿ ಪೋಸ್ಟ್ ವಿಳಾಸ ನೀಡಲಾಗಿದ್ದು ಅದನ್ನು ಗಮನಿಸಿಕೊಂಡು ಅದೇ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿಯನ್ನು ಸೆಪ್ಟೆಂಬರ್ 2ರ ಒಳಗೆ ಸಲ್ಲಿಸಬೇಕು.
ಈ ಲೇಖನದಲ್ಲಿ Air Force Agniveer vayu Non-Combatant Vacancy 2024 ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 17, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 2 2024
ಅರ್ಹತೆಗಳು:
ಮನ್ಯತೆ ಪಡೆದಿರುವ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 21 ವರ್ಷದ ಒಳಗಿರಬೇಕು.
2 ಜನವರಿ 2004 ಮತ್ತು 2 ಜುಲೈ 2007 (ಎರಡೂ ದಿನಗಳನ್ನು ಒಳಗೊಂಡಂತೆ) ನಡುವೆ ಜನಿಸಿದ ಅಭ್ಯರ್ಥಿಗಳುಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವೇತನ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹28,000/ ರಿಂದ ₹40,000 ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
• ಲಿಖಿತ ಪರೀಕ್ಷೆ • ದೈಹಿಕ ಸಾಮರ್ಥ್ಯ ಪರೀಕ್ಷೆ (PFT) • ಡಾಕ್ಯುಮೆಂಟ್ ಪರಿಶೀಲನೆ • ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ.
How to Apply for Agniveer Vayu Non-Combatant Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಮೊದಲಿಗೆ ಅಧಿಕೃತ ವೆಬ್‌ಸೈಟ್ https://agnipathvayu.cdac.in/AV/ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ
ದೇಶದ ಪ್ರತಿಯೊಂದು ಪ್ರದೇಶಕ್ಕೆ ಅನುಗುಣವಾಗಿ ಅಂಚೆ ವಿಳಾಸವನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಲಾದ ಅಂಚೆ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬೇಕು.