ಭಾರತೀಯ ವಾಯುಪಡೆ (IAF) ಅಗ್ನಿವೀರ್ ವಾಯು ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು 01/2025 ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಏರ್ ಫೋರ್ಸ್ ಅಗ್ನಿವೀರ್ ಸ್ಪೋರ್ಟ್ಸ್ ಕೋಟಾ ನೇಮಕಾತಿಯಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯೋಜಿಸಲಾಗುತ್ತದೆ. ಅಥ್ಲೆಟಿಕ್ಸ್ ಹ್ಯಾಂಡ್ ಬಾಲ್, ಬಾಸ್ಕೆಟ್ ಬಾಲ್ , ಬಾಕ್ಸಿಂಗ್ , ಕ್ರಿಕೆಟ್ , ಫುಟ್ಬಾಲ್, ಕಬ್ಬಡ್ಡಿ, ವಾಲಿಬಾಲ್ , ಶೂಟಿಂಗ್ ವೈಟ್ ಲಿಫ್ಟಿಂಗ್, ಕ್ರೀಡೆಗಳ ಅಂತರಾಷ್ಟ್ರೀಯ ಅಥವಾ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ದೈಹಿಕ ಸಾಮರ್ಥ್ಯ ಮತ್ತು ನಿಗದಿಪಡಿಸಲಾದ ಕ್ರೀಡಾ ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಏರ್ ಫೋರ್ಸ್ ಅಗ್ನಿವೀರ್ ಸ್ಪೋರ್ಟ್ಸ್ ಕೋಟಾ ನೇಮಕಾತ 2024ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ agnipathvayu.cdac.in. ಅಗಸ್ಟ್ 29 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ AGNIVEERVAYU (Sports) Intake 01/2025 Notification ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 29 2024
ಅರ್ಹತೆಗಳು:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12 ನೇ ತೇರ್ಗಡೆ / ಡಿಪ್ಲೊಮಾ / 02 ವರ್ಷಗಳ ವೃತ್ತಿಪರ ಕೋರ್ಸ್ ಪಡೆದುಕೊಂಡಿರಬೇಕು.
ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ ಗರಿಷ್ಠ 21 ವರ್ಷದ ಒಳಗಿರಬೇಕು.