Karnataka Agricultural Sales Department Job Notification 2025
ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್, ಮಾರುಕಟ್ಟೆ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಮಾರಾಟ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ನೇರವಾಗಿ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/indexnewನಲ್ಲಿ ಅ.31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 09, 2025
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 31, 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 01, 2025
ಹುದ್ದೆಯ ವಿವರ:
ಸಹಾಯಕ ಎಂಜಿನಿಯರ್ (AE ಸಿವಿಲ್) – 10 ಹುದ್ದೆಗಳು
ಜೂನಿಯರ್ ಎಂಜಿನಿಯರ್ (JE ಸಿವಿಲ್) – 05 ಹುದ್ದೆಗಳು
ಮಾರುಕಟ್ಟೆ ಮೇಲ್ವಿಚಾರಕ – 30 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕ (FDA) – 30 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕ (SDA) – 30 ಹುದ್ದೆಗಳು
ಮಾರಾಟ ಸಹಾಯಕರು – 75 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಕರ್ನಾಟಕದ ಕೃಷಿ ಮಾರಾಟ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.
2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿಯ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
2A, 2B, 3A, 3B ಅಭ್ಯರ್ಥಿಗಳು – ರೂ.750/-
ಪ.ಜಾತಿ/ಪ.ಪಂಗಡ, ಮಾಜಿ ಸೇನಾ ಅಭ್ಯರ್ಥಿಗಳು- 500/-
ವಿಕಲಚೇತನ ಅಭ್ಯರ್ಥಿಗಳು – 250/-
ವೇತನ:
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ,ಮಾಸಿಕ ರೂ. 34,100/- ರಿಂದ ರೂ.99,100/- ವರೆಗೆ ವೇತನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಇ-ಮೇಲ್, ದೂರವಾಣಿ ಸಂಖ್ಯೆ ನೀಡಿ ರೆಜಿಸ್ಟರ್ ಆಗಿರಿ.
Agricultural Sales Department Karnataka Job Application Form-2025
ಲಾಗಿನ್ ಆಗಿ ಮತ್ತು ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲ ವಿವರಗಳನ್ನು ಪೂರೈಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ನಿಮ್ಮ ಇತ್ತೀಚಿನ ಛಾಯಾಚಿತ್ರ ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ನೀವು ನೀಡಿರುವ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ನಂತರ ಅರ್ಜಿಯನ್ನು Submit ಮಾಡಿ ಅರ್ಜಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.