AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನಲ್ಲಿ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ (ಸಹಾಯಕ ಸಿಬ್ಬಂದಿ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಪ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ದೆಹಲಿ, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ನಾಗ್ಪುರ ಮತ್ತು ತಿರುವನಂತಪುರಂ ಸೇರಿದಂತೆ ವಿವಿಧ ಸ್ಥಳಗಳಿಗೆ 25 ಹುದ್ದೆಗಳಿಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳನ್ನು (ಸಹಾಯಕ ಸಿಬ್ಬಂದಿ) ನೇಮಿಸಿಕೊಳ್ಳುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ನಂತರ ವೇತನದೊಂದಿಗೆ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬಿಇ/ಬಿ. ಏರೋನಾಟಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಟೆಲಿಕಮ್ಯುನಿಕೇಷನ್ ನಲ್ಲಿ ಪದವಿ ಪಡೆದವರು ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳು AIESL ವೆಬ್‌ಸೈಟ್‌ನಲ್ಲಿ ನೀಡಲಾಗಿರುವ Google ಫಾರ್ಮ್‌ಗಳ ಲಿಂಕ್ ಮೂಲಕ ತಮ್ಮ ವಿವರಗಳನ್ನು ಭರ್ತಿ ಮಾಡಬೇಕು ಅಥವಾ ನಿಗದಿತ ಕಛೇರಿಯ ವಿಳಾಸಕ್ಕೆ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದು.
AI ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ (AIESL) ನಲ್ಲಿ ಗ್ರಾಜುಯೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳ ನೇಮಕಾತಿ 2024ಕ್ಕೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ https://www.aiesl.in/Careers.aspx ಗೆ ಭೇಟಿ ನೀಡಿ, Google farm ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 24ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.ಈ ಲೇಖನದಲ್ಲಿ AIESL Assistant Supervisor Recruitment ರ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು, ಗಮನವಿಟ್ಟು ಓದಿರಿ.
Aiesl Graduate Engineer Trainee Recruitment 2024
Shortview of AIESL Graduate Engineer Trainee Notification 2024
Organization Name – Air India Engineering Services Limited Post Name – Graduate Engineer Trainee Total Vacancy – 25 Application Process: Offline Job Location – All Over India
ನೇಮಕಾತಿಯ ಪ್ರಮುಖ ದಿನಾಂಕಗಳು:
ಅರ್ಜಿಯ ಪ್ರಾರಂಭ ದಿನಾಂಕ : ಸೆಪ್ಟೆಂಬರ್ 04, 2024 ಅರ್ಜಿಯ ಕೊನೆಯ ದಿನಾಂಕ: ಸೆಪ್ಟೆಂಬರ್ 24, 2024
ವಿದ್ಯಾರ್ಹತೆ:
ಅಧಿಕೃತ ಅಧಿಸೂಚೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಏರೋನಾಟಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಟೆಲಿಕಮ್ಯುನಿಕೇಷನ್ಸ್, ಇನ್‌ಸ್ಟ್ರುಮೆಂಟೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಇಂಡಸ್ಟ್ರಿಯಲ್, ಅಥವಾ ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ (ಅಥವಾ ತತ್ಸಮಾನ) BE/B.Tech ಪದವಿಯನ್ನು ಹೊಂದಿರಬೇಕು.
GATE ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದುಕೊಂಡಿರಬೇಕು.
ವಯಸ್ಸಿನ ಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯಥಿಗಳು ಅಭ್ಯರ್ಥಿಗಳು 01.09.2024 ರಂತೆ ಗರಿಷ್ಠ 28 ವರ್ಷಗಳನ್ನು ದಾಟಿರಬಾರದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಗೇಟ್ ಶೇಕಡಾವಾರು ಆಧಾರದ ಮೇಲೆ ಸಂದರ್ಶನಗಳಿಗೆ ಶಾರ್ಟ್‌ಲಿಸ್ಟ್ ಮಾಡುತ್ತದೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ:
ಈ ಹುದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹40,000/- ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹1500
SC/ST/ExServicemen ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಪಾವತಿ ವಿಧಾನ – ಡಿಮ್ಯಾಂಡ್ ಡ್ರಾಫ್ಟ್
How to Apply for AIESL Assistant Supervisor Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಪೂರ್ಣ ಬಯೋ-ಡೇಟಾ, ಡಿಮ್ಯಾಂಡ್ ಡ್ರಾಫ್ಟ್, ಪ್ರಮಾಣಪತ್ರಗಳ ದೃಢೀಕೃತ ಪ್ರತಿಗಳು (ಜಾತಿ, ಜನ್ಮ ದಿನಾಂಕ, ಮಾರ್ಕ್ ಶೀಟ್‌ಗಳು), ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಜೊತೆಗೆ ನಿಗದಿತ ನಮೂನೆಯಲ್ಲಿ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ನಿಗದಿತ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಕಛೇರಿಯ ವಿಳಾಸ:
ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ AI ಇಂಜಿನಿಯರಿಂಗ್ ಸೇವೆಗಳ ಲಿಮಿಟೆಡ್ ಸಿಬ್ಬಂದಿ ವಿಭಾಗ, 2 ನೇ ಮಹಡಿ, CRA ಕಟ್ಟಡ, ಸಫ್ದರ್‌ಜಂಗ್ ವಿಮಾನ ನಿಲ್ದಾಣ ಸಂಕೀರ್ಣ, ಅರಬಿಂದೋ ಮಾರ್ಗ, ನವದೆಹಲಿ – 110003