AIIMS Common Recruitment Examination 4 Notification 2025
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು(AIIMS) ಮತ್ತು ಇತರೆ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿನ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ಹುದ್ದೆಗಳನ್ನು ಸಾಮಾನ್ಯ ನೇಮಕಾತಿ ಪರೀಕ್ಷೆ-4ರ ಮೂಲಕ ಭರ್ತಿಗಾಗಿ ಏಮ್ಸ್ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ವಿವಿಧ ಬೋಧಕೇತರ ವೃಂದಗಳಲ್ಲಿ ಖಾಲಿ ಇರುವ ಒಟ್ಟು 1383 ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.02ರೊಳಗೆ ಅರ್ಜಿ ಸಲ್ಲಿಸಲು AIIMS ಅಧಿಕೃತ ಜಾಲತಾಣ https://aiimsexams.ac.in/ಕ್ಕೆ ಭೇಟಿ ನೀಡಿ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ (ಪೇ ಲೆವೆಲ್ 1-7ರ) ನಿಯಮದಂತೆ ಮಾಹೆಯಾನ ವೇತನ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ – 3000ರೂ. ಪ.ಜಾತಿ, ಪ.ಪಂಗಡ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 2,400ರೂ. ಪಿಡಬ್ಲ್ಯೂಬಿಡಿ – ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• AIIMS ಅಧಿಕೃತ ಜಾಲತಾಣ https://aiimsexams.ac.in/advertisement/6915d3056d76b75af3e2187dಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಅಭ್ಯರ್ಥಿ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.