ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ – ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪ್ರಸ್ತುತ ಸಾಲಿಗೆ ವಿವಿಧ ಪಿಜಿ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ.

Published on:

ಫಾಲೋ ಮಾಡಿ
Akkamahadevi University PG Admission 2025
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಪ್ರವೇಶಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ, ಸ್ನಾತಕೋತ್ತರ ಡಿಪ್ಲೋಮಾ, ಬಿ.ಪಿ.ಎಡ್, ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಯು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(UUCMS) ಪೋರ್ಟಲ್​ https://uucms.karnataka.gov.in/login/Indexನ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕೋರಲಾಗಿದೆ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment