Ambedkar Development Corporation Loan Schemes for SC 2025
2025-26ನೇ ಸಾಲಿಗೆ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಪಡೆಯಲು ಪ.ಜಾತಿಯ ಅರ್ಹ ಪಲಾನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ಯೋಜನೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು, ಅರ್ಹತೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
✓ ನೇರಸಾಲ ಯೋಜನೆಯಡಿಯಲ್ಲಿ ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲಯನ್ನು ನೀಡಲಾಗುತ್ತದೆ.
ಕುರಿ ಸಾಕಾಣಿಕೆ ಯೋಜನೆ:
✓ ಕುರಿ ಸಾಕಾಣಿಕೆ ಯೋಜನೆಯಡಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕೆ ನಿಗಮದಿಂದ ಘಟಕ ವೆಚ್ಚದ 1 ಲಕ್ಷರೂ. (ಸಹಾಯಧನ 50 ಸಾವಿರರೂ. ಹಾಗೂ ಸಾಲ 50 ಸಾವಿರರೂ. ) ಅನ್ನು ಶೇ.4 ರಷ್ಟು ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ಗಳ ಸಹಯೋಗದೊಂದಿಗೆ):-
✓ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿಯಲ್ಲಿ ಸ್ವಾವಲಂಭಿ ಸಾರಥಿ – ಸರಕು ವಾಹನ ಅಥವಾ ಹಳದಿ ಬೋರ್ಡ್ ಟ್ಯಾಕ್ಸಿ ಖರೀದಿ ಉದ್ದೇಶದಿಂದ ಘಟಕ ವೆಚ್ಚದ ಶೇ.75ರಷ್ಟು ಅಥವಾ ಗರಿಷ್ಠ 4 ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಫಾಸ್ಟ್ ಫುಡ್ ಟ್ರಕ್ ಟ್ರೈಲರ್ ಅಥವಾ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ ಯೋಜನೆಯಡಿಯಲ್ಲಿ ಫುಡ್ ಕಾರ್ಟ್ ವಾಹನಗಳ ಖರೀದಿ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ 4 ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಹೈನುಗಾರಿಕೆ ಯೋಜನೆಯಡಿಯಲ್ಲಿ ಹೈನುಗಾರಿಕೆ ನಡೆಸಲು ಎರಡು ಎಮ್ಮೆ ಅಥವಾ ಹಸುಗಳ ಖರೀದಿ ಉದ್ದೇಶದಡಿ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 1.25 ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
✓ ಇತರೆ ಉದ್ದೇಶ ಯೋಜನೆಯಡಿಯಲ್ಲಿ ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ.70ರಷ್ಟು ಅಥವಾ 2 ಲಕ್ಷರೂ. ಗಳ ಸಹಾಯಧನವನ್ನು ನೀಡಲಾಗುತ್ತದೆ.
ಮೈಕ್ರೋ ಕ್ರೆಡಿಟ್ (ಪ್ರೇರಣಾ)ಯೋಜನೆ:
✓ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿಯಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ 5 ಲಕ್ಷರೂ. (ಸಹಾಯಧನ 2.50 ಲಕ್ಷರೂ., ಸಾಲ 2.50 ಲಕ್ಷರೂ.) ಅನ್ನು ಶೇ.4 ರಷ್ಟು ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಗಂಗಾ ಕಲ್ಯಾಣ ಯೋಜನೆ:
✓ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಸಹಾಯಧನ 3.75 ಲಕ್ಷರೂ. ಸಾಲ 50 ಸಾವಿರ ರೂ. ನೀಡಲಾಗುತ್ತದೆ.
ಭೂ ಒಡೆತನ ಯೋಜನೆ:
✓ ಭೂ ಒಡೆತನ ಯೋಜನೆಯಡಿಯಲ್ಲಿ ಭೂ ರಹಿತ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಗೆ ಘಟಕ ವೆಚ್ಚ 25/20 ಲಕ್ಷರೂ. (ಶೇ.50%, ಸಾಲ ಶೇ.50% ಸಹಾಯಧನವನ್ನು ಶೇ.4 ರಷ್ಟು ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರಬೇಕು.
• ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು, ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು.
• ಅರ್ಜಿದಾರರ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಭಾಗಕ್ಕೆ 1.5 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿರುವವರಿಗೆ 2 ಲಕ್ಷರೂ. ಮೀರಿರಬಾರದು.
• ಭೂಒಡೆತನ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಾಗಿರಬೇಕು.
ವಯೋಮಿತಿ:
ಅರ್ಜಿದಾರರು ವಿವಿಧ ಯೋಜನೆಯಡಿ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು:
ಭಾವಚಿತ್ರ
ಅರ್ಜಿದಾರರ ಚುನಾವಣಾ ಗುರುತಿನ ಚೀಟಿ
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣಪತ್ರ
ಯೋಜನಾ ವರದಿ / ದರಪಟ್ಟಿ
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ಬುಕ್
ವಿಕಲಚೇತನರಾಗಿದ್ದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು.
How to Apply for Ambedkar Loan Schemes for SC 2025
ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬಾಪೂಜಿ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ವಿಧಾನ;
• ಸೇವಾ ಸಿಂಧು ಪೋರ್ಟಲ್https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ.
• ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Ambedkar Loan Schemes for SC 2025 Online Application Form Link