ಅಂಡಮಾನ್ ಮತ್ತು ನಿಕೋಬಾರ್ ಪೊಲೀಸ್ ಇಲಾಖೆಯು ಗ್ರೂಪ್-ಬಿ/ಗ್ರೂಪ್-ಸಿ ವೃಂದದ ನಾನಾ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಸಲ್ಲಿಕೆಗೆ ಮೇ 17 ಕೊನೆದಿನವಾಗಿದೆ.
ತನ್ನ ವಿವಿಧ ಘಟಕಗಳಾದ ಪೊಲೀಸ್ ಇಲಾಖೆಯ ಕಾರ್ಯನಿರ್ವಾಹಕ ಶಾಖೆಗೆ 219 ಹುದ್ದೆಗಳು, ಪೊಲೀಸ್ ರೇಡಿಯೋ ಸಂಸ್ಥೆಗೆ 108 ಹುದ್ದೆಗಳು, ಪೊಲೀಸ್ ಮೋಟಾರ್ ಟ್ರಾನ್ಸ್‌ಪೋರ್ಟ್ 23 ಹುದ್ದೆಗಳು, ಪೊಲೀಸ್ ಮರೈನ್ ಫೋರ್ಸ್ 13 ಹುದ್ದೆಗಳು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು 99 ಹುದ್ದೆಗಳು, ಇಂಡಿಯಾ ರಿಸರ್ವ್ ಬೆಟಾಲಿಯನ್ 36 ಹುದ್ದೆಗಳು ಸೇರಿದಂತೆ ಒಟ್ಟು 495 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅರ್ಜಿದಾರರು ಅಧಿಕೃತ ಅಂಡಮಾನ್ ನಿಕೋಬಾರ್ ಜಾಲತಾಣ https://erecruitment.andamannicobar.gov.in/ಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 27, 2026
- ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 17, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ, ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ, ಪದವಿ, ಎಂಜಿನಿಯರಿಂಗ್ ಪದವಿ ಅಥವಾ ಇತರೆ ತತ್ಸಮಾನ ಅರ್ಹತೆಗಳನ್ನು ಹೊಂದಿರಬೇಕು.
ವಿದ್ಯಾರ್ಹತೆಯ ಹೆಚ್ಚಿನ ಸ್ಪಷ್ಟ ವಿವರಗಳಿಗಾಗಿ ಅಧಿಕೃತ ಅಧಿಸೂಚನೆ ಓದಲು ಮನವಿ.
ವಯೋಮಿತಿ:
17-05-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ 38 ವರ್ಷಗಳು(ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ಬದಲಾಗುತ್ತದೆ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು)
ವಯೋಮಿತಿ ಸಡಿಲಿಕೆ: ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು.
ಆಯ್ಕೆ ವಿಧಾನ:
- ದೈಹಿಕ ಮಾಪನ ಮತ್ತು ಸಹಿಷ್ಣುತೆ ಪರೀಕ್ಷೆ(PME & PET)
- ಲಿಖಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ/ ಟೈಪಿಂಗ್ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
ಆಯಾ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆಯಿದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಪ್ರತಿ ತಿಂಗಳು ₹18,000 ರಿಂದ ₹1,12,400ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹100, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೂ – ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಕೆಳಗಿನ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕ ಪಾವತಿಸಬೇಕು.
Account Name : Principal, Dr. B.R. Ambedkar Institute of Technology,
Bank Account Number: 41881546799,
Name of the Bank : State Bank of India,
Branch: Dollygunj,
IFSC Code: SBIN0017178
ಅರ್ಜಿ ಸಲ್ಲಿಸುವುದು ಹೀಗೆ…
• ಮೊದಲಿಗೆ ಅಭ್ಯರ್ಥಿಗಳು ಅಂಡಮಾನ್ ನಿಕೋಬಾರ್ ಜಾಲತಾಣ https://erecruitment.andamannicobar.gov.in/ಕ್ಕೆ ಭೇಟಿ ನೀಡಿ.
• ಬಳಿಕ ಪರದೆಯ ಮೇಲಿನ ಬಲ ಮೂಲೆಯಲ್ಲಿರುವ “ಅಭ್ಯರ್ಥಿ ಕಾರ್ನರ್” ಬಟನ್ ಮೇಲೆ ಕ್ಲಿಕ್ ಮಾಡಿ.
• ಮುಂದುವರೆದಂತೆ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | police.andamannicobar.gov.in |
| More Updates | Karnatakahelp.in |
Police