ಅಂಡಮಾನ್ ಮತ್ತು ನಿಕೋಬಾರ್ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 51 ಗ್ರೂಪ್ ‘ಸಿ’ ಸಹಾಯಕ ನರ್ಸ್ ಮಿಡ್‌ವೈಫ್(ಎಎನ್‌ಎಂ) ಹುದ್ದೆಗಳ ಭರ್ತಿಗಾಗಿ ಅಂಡಮಾನ್ ಮತ್ತು ನಿಕೋಬಾರ್ ಆಡಳಿತ ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿ ಜೊತೆಗೆ ಎಎನ್‌ಎಂ ಪ್ರಮಾಣಪತ್ರ ಹೊಂದಿರುವ 18 ರಿಂದ 38 ವರ್ಷ ವಯೋಮಾನದ ಅರ್ಹ ಮಹಿಳಾ ಉದ್ಯೋಗಾಕಾಂಕ್ಷಿಗಳು ಮೇ 06ರೊಳಗೆ ಅಂಡಮಾನ್ ನಿಕೋಬಾರ್ ಅಧಿಕೃತ ಜಾಲತಾಣ https://erecruitment.andamannicobar.gov.in/ ಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು;
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 16, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 06, 2026
- ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಮೇ 06, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ ದ್ವಿತೀಯ ಪಿಯುಸಿ (12ನೇ ತರಗತಿ) ಪೂರ್ಣಗೊಳಿಸಿರಬೇಕು ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿಂದ ಮಾನ್ಯವಾದ ANM ತರಬೇತಿ ಪ್ರಮಾಣಪತ್ರದೊಂದಿಗೆ ANM ಪ್ರಮಾಣಪತ್ರ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
06-05-2026 ರಂತೆ;
ಕನಿಷ್ಠ 18 ವರ್ಷಗಳು, ಗರಿಷ್ಠ 38 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಹಾಗೂ ಕೇಂದ್ರ ಸರ್ಕಾರಿ ನಾಗರಿಕ ನೌಕರ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಬಿಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 10 ವರ್ಷಗಳು.
ಆಯ್ಕೆ ವಿಧಾನ:
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹25,500 ರಿಂದ ₹81,100ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹25 ಹಾಗೂ ಪರಿಶಿಷ್ಟ ಪಂಗಡ, ಮಹಿಳಾ ಹಾಗೂ ವಿಭಾಗೀಯ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಈ ಕೆಳಗಿನ ಬ್ಯಾಂಕ್ ಖಾತೆಗೆ ಅರ್ಜಿ ಶುಲ್ಕ ಪಾವತಿಸಬೇಕು.
Account Name : Principal, Dr. B.R. Ambedkar Institute of Technology,
Bank Account Number: 41881546799,
Name of the Bank : State Bank of India,
Branch: Dollygunj,
IFSC Code: SBIN0017178
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು ಅಂಡಮಾನ್ ನಿಕೋಬಾರ್ ಅಧಿಕೃತ ಜಾಲತಾಣ https://erecruitment.andamannicobar.gov.in/ಕ್ಕೆ ಭೇಟಿ ನೀಡಿ.
• ಬಳಿಕ ಪರದೆಯ ಮೇಲಿನ ಬಲ ಮೂಲೆಯಲ್ಲಿರುವ “ಅಭ್ಯರ್ಥಿ ಕಾರ್ನರ್” ಬಟನ್ ಮೇಲೆ ಕ್ಲಿಕ್ ಮಾಡಿ.
• ಮುಂದುವರೆದಂತೆ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | police.andamannicobar.gov.in |
| More Updates | Karnatakahelp.in |