ಪ.ಜಾತಿ, ಪ.ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on:

ಯಾದಗಿರಿ: 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಗ್ರೇಡ್-1 ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಯು SATS ನಂಬರ ಕಡ್ಡಾಯವಾಗಿ ಹೊಂದಿರಬೇಕು, ಮೆಟ್ರಿಕ್ ನಂತರದ ವಿದ್ಯಾರ್ಥಿಯು ಸಂಬ್ಬಂದ ಪಟ್ಟ ವಿಶ್ವವಿಧ್ಯಾನಿಲಯದ ನೋಂದಣಿ ಸಂಖ್ಯೆ(Registration Number) ಕಡ್ಡಾಯವಾಗಿ ಹೊಂದಿರಬೇಕು. ವಿದ್ಯಾರ್ಥಿಯ ಕುಟುಂಬದ ಆದಾಯವು ಅರ್ಹ ಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಆದಾಯ ಮತ್ತು ಜಾತಿ ಪ್ರಮಾಣಪತ್ರ ಪಡೆದಿರಬೇಕು. ವಿದ್ಯಾರ್ಥಿಯು ಆಧಾರ ಕಾರ್ಡ ಹೊಂದಿರಬೇಕು. ವಿದ್ಯಾರ್ಥಿಯ ತಂದೆ-ತಾಯಿಯ, ಪೋಷಕರ ಆಧಾರ ಕಾರ್ಡ ಹೊಂದಿರಬೇಕು. ವಿದ್ಯಾರ್ಥಿಯು ವಸತಿ ನಿಲಯಾರ್ಥಿಯಾಗಿದ್ದಲ್ಲಿ ವಸತಿ ನಿಲಯದ ವಿವರ ನಮೂದಿಸುವುದು ವಿದ್ಯಾರ್ಥಿಯ ಬ್ಯಾಂಕ್‌ ಖಾತೆಗೆ ಆಧಾರ ಜೋಡಣೆ ಎನ್‌ಪಿಸಿಐ(NPCI)ಗೆ ಜೋಡಣೆ ಮಾಡಬೇಕು.

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಾತಿಗೆ ಆನ್‌ಲೈನ್ https://swdhmis.karnataka.gov.in/ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ 2026ರ ಜುಲೈ 31ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment