ISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ಶಿಷ್ಯವೇತನ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
IISC, IIT, & NIT ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿoಗ್ ಪದವಿದರರಿಗೆ ಶಿಷ್ಯವೇತನ ತರಬೇತಿ ನೀಡಲಾಗುತ್ತದೆ.ಈ ಲೇಖನದಲ್ಲಿ ಸದರಿ ತರಬೇತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25-04-2025
ವಿದ್ಯಾರ್ಹತೆ:
ಅಭ್ಯರ್ಥಿಯು ಇಂಜಿನಿಯರಿoಗ್ ಪದವಿ ಪೂರ್ಣಗೊಳಿಸಿರಬೇಕು.
ಶಿಷ್ಯವೇತನ:
ಅಭ್ಯರ್ಥಿಗಳಿಗೆ ಮಾಸಿಕ 15.000 ರೂ. ಗಳಂತೆ ಶಿಷ್ಯ ವೇತನವನ್ನು ನೀಡಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು
ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು ರವರಿಂದ ಕಚೇರಿ ಅವಧಿಯಲ್ಲಿ ಪಡೆದು. - ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ವಿವರಗಳನ್ನು ನಮೂದಿಸಿ ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಮೈಸೂರು. ಈ ವಿಳಾಸಕ್ಕೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ:
- ಮೊಬೈಲ್ ಸಂಖ್ಯೆ 9742099989 ಅನ್ನು ಸಂಪರ್ಕಿಸಬಹುದು.
Important Direct Links:
More Updates | Karnataka Help.in |