ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿ ಇಲ್ಲಿ ವಿವರಿಸಲಾಗಿದೆ.

By Shwetha Chidambar

Published On:

IST

ಫಾಲೋ ಮಾಡಿ

DYES Coaches Recruitment 2025
DYES Coaches Recruitment 2025

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಕ್ರೀಡಾಪಟುಗಳಿಗೆ ತರಬೇತಿ ನೀಡುವ ತರಬೇತುದಾರ ನೇಮಕಾತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಯಾದಗಿರಿ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ನೀಡುವ ಸಲುವಾಗಿ ಒಟ್ಟು 3 ತರಬೇತುದಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ಪ್ರಮುಖ ದಿನಾಂಕಗಳು, ವೇತನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-07-2025

ತರಬೇತಿ ನೀಡಬೇಕಾದ ಕ್ರೀಡೆ ಹಾಗೂ ಜಿಲ್ಲೆಯ ವಿವರ:

  • ಯಾದಗಿರಿ ಜಿಲ್ಲೆ- 01 ಅಥ್ಲೆಟಿಕ್ಸ್ ತರಬೇತುದಾರ
  • ಬಾಗಲಕೋಟೆ ಜಿಲ್ಲೆ – 01 ಹಾಕಿ ತರಬೇತುದಾರ
  • ಕೊಪ್ಪಳ ಜಿಲ್ಲೆ – 01 ವಾಲಿಬಾಲ್ ತರಬೇತುದಾರ

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು ಹಾಗೂ ರಾಷ್ಟ್ರೀಯ ಕ್ರೀಡಾ ಸಂಸ್ಥೆ (ಎನ್ ಎಸ್-ಎನ್‌ಐಎಸ್) / ಭಾರತೀಯ ಕ್ರೀಡಾ ಪ್ರಾಧಿಕಾರ ಸಂಸ್ಥೆಯಿಂದ ಆಯಾ ಕ್ರೀಡೆಯಲ್ಲಿ ಒಂದು ವರ್ಷದ ಅವಧಿ ತರಬೇತಿಯಲ್ಲಿ ಡಿಪ್ಲೊಮಾ ಪಡೆದಿರಬೇಕು ಅಥವಾ ಏಷಿಯನ್ ಕ್ರೀಡಾಕೂಟ ಮತ್ತು ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಪದಕ ಪಡೆದಿರಬೇಕು ಅಥವಾ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿರಬೇಕು.

ವಯೋಮಿತಿ:

ಗರಿಷ್ಠ ವಯಸ್ಸಿನ ಮಿತಿ 58 ವರ್ಷಗಳು

ವೇತನ:

ಮಾಸಿಕ 39,960ರೂ. ವರೆಗೆ ವೇತನ ನೀಡಲಾಗುತ್ತದೆ

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

  • ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕೃತ ವೆಬ್ಸೈಟ್ https://dyes.karnataka.gov.in/ ಗೆ ಭೇಟಿ ನೀಡಿ.
  • ಇತ್ತೀಚಿನ ಸುದ್ದಿಗಳು ವಿಭಾಗದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತುದಾರರ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಳ್ಳಿ.
  • ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ ನಮೂದಿಸಿ. ಭಾವಚಿತ್ರ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ.

ಈ ಕೆಳಗಿನ ವಿಳಾಸಕ್ಕೆ ಜುಲೈ 30ರೊಳಗೆ ಕಳುಹಿಸಬಹುದು

ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001

Important Direct Links:

Application Form PDF LinkDownload
Official Websitedyes.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment