Free Sewing Machine: ಉಚಿತ ಹೊಲಿಗೆ ಯಂತ್ರ, ಸುಧಾರಿತ ಸಲಕರಣೆ ಪಡೆಯಲು ಅರ್ಜಿ ಆಹ್ವಾನ

2025-26ನೇ ಸಾಲಿಗೆ ಸಂಬಂಧಿಸಿದಂತೆ ಉಚಿತವಾಗಿ ಹೊಲಿಗೆ ಯಂತ್ರ, ಟೂಲ್ ಕಿಟ್ ನೀಡಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.

By Shwetha Chidambar

Published On:

IST

ಫಾಲೋ ಮಾಡಿ

Free Sewing Machine and Tool Kit Online Form 2025
Free Sewing Machine and Tool Kit Online Form 2025

ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೊಲಿಗೆಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವಲಯ ಯೋಜನೆಯ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಬಡಿಗತನ ಮತ್ತು ಕ್ಷೌರಿಕ ಕಸಬುದಾರರಿಗೆ ಉಚಿತವಾಗಿ ಉಪಕರಣಗಳನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಯಾ ಜಿಲ್ಲಾ ಪಂಚಾಯಿತಿಯ ಅಧಿಕೃತ ಜಾಲತಾಣಗಳ ಮೂಲಕ ಅರ್ಜಿ ಸಲ್ಲಿಸಹುದು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಲೇಖನದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ದಾಖಲಾತಿಗಳು ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಯಾದಗಿರಿ –

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – 01 ಜುಲೈ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜುಲೈ 2025

ಹಾಸನ –

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – 07 ಜುಲೈ 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಆಗಸ್ಟ್ 2025

ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:

ಹೊಲಿಗೆಯಂತ್ರಗಳಿಗಾಗಿ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು ಸುಧಾರಿತ ಸಲಕರಣೆಗಳಿಗಾಗಿ ಯಾವುದೇ ಶೈಕ್ಷಣಿಕ ಅರ್ಹತೆ ಇರುವುದಿಲ್ಲ.

ವಯೋಮಿತಿ:

ಹೊಲಿಗೆಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು;

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು

ಸುಧಾರಿತ ಸಲಕರಣೆ ಯೋಜನೆಗೆ ಅರ್ಜಿ ಸಲ್ಲಿಸಲು;

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು

ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ದಾಖಲಾತಿಗಳು:

  1. ಜನ್ಮ ದಿನಾಂಕ ನಮೂದಿಸಿರುವ ದಾಖಲೆ. (ಅಂಕಪಟ್ಟಿ / ವರ್ಗಾವಣೆ ಪ್ರಮಾಣಪತ್ರ)
  2. ವರ್ಗಾವಣೆ ಪ್ರಮಾಣಪತ್ರ/ ಅಂಕಪಟ್ಟಿ
  3. ಜಾತಿ ಪ್ರಮಾಣ ಪತ್ರ. (ಪ.ಜಾ, ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ)
  4. ವಿಕಲಚೇತನ ಪ್ರಮಾಣ ಪತ್ರ. (ವಿಕಲಚೇತನರಾಗಿದ್ದಲ್ಲಿ)
  5. ಚಾಲ್ತಿಯಲ್ಲಿರುವ ಪಡಿತರ ಚೀಟಿ ಮತ್ತು ಆಧಾರ ಗುರುತಿನ ಚೀಟಿ.
  6. ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  7. ವೃತ್ತಿ ಪ್ರಮಾಣ ಪತ್ರ.

ವಿಶೇಷ ಸೂಚನೆ:

  • ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ನಗರ ಪ್ರದೇಶದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
  • ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
  • ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ/ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಯವರಿಂದ ಹೊಲಿಗೆ/ಕ್ಷೌರಿಕ/ಬಡಿಗೆತನ ವೃತ್ತಿ ಮಾಡುತ್ತಿರುವ ಬಗ್ಗೆ, ಧೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು.
  • ಹೊಲಿಗೆಯಂತ್ರಕ್ಕಾಗಿ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು.
  • ಬಡಿಗೆತನ ಉಪಕರಣಗಳಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
  • ಕ್ಷೌರಿಕ ಉಪಕರಣಗಳಿಗಾಗಿ ಎಲ್ಲಾ ವರ್ಗದವರು ಅರ್ಜಿ ಸಲ್ಲಿಸಬಹುದು.
  • ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
  • ಕಳೆದ 3 ವರ್ಷದಲ್ಲಿ ಈ ಇಲಾಖೆಯಿಂದ ಹೊಲಿಗೆ/ಕ್ಷೌರಿಕ/ಬಡಿಗೆತನ ಸಲಕರಣೆಗಳನ್ನು ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
  • ಯಾವುದೇ ಫಲಾನುಭವಿಯು ಕೇವಲ ಒಂದು ಅರ್ಜಿ ಸಲ್ಲಿಸಲು ಹೊಲಿಗೆ/ಕ್ಷೌರಿಕ/ಬಡಿಗೆತನ ಅವಕಾಶವಿರುತ್ತದೆ.
  • ಅರ್ಜಿದಾರರು ಆನ್ ಲೈನ್ ನಲ್ಲಿ ಸಲ್ಲಿಸಿದ ಅರ್ಜಿಯ ಮೂಲ ಪ್ರತಿಯನ್ನು ಉಪಕರಣಗಳನ್ನು ಪಡೆಯುವಾಗ ಅದನ್ನು ಕಚೇರಿಗೆ ಸಲ್ಲಿಸಬೇಕು.

How to Apply for Free Sewing Machine and Tool Kit?

ಅರ್ಜಿ ಸಲ್ಲಿಸುವ ವಿಧಾನ;

  • ಆಯಾ ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಅಧಿಸೂಚನೆ ವಿಭಾಗದಲ್ಲಿ ಕ್ಷೌರಿಕ/ಬಡಿಗೆತನ ಸಲಕರಣೆಗಳ ಉಪಕರಣಕ್ಕಾಗಿ ಆನ್ಸೆನ್ ಅರ್ಜಿ ಲಿಂಕ್, ವಿದ್ಯುತ್ತ ಚಾಲಿತ ಹೊಲಿಗೆ ಯಂತ್ರ ಉಪಕರಣಕ್ಕಾಗಿ ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Hassan Free Sewing Machine Online Form 2025-26 LinkApply Now
Yadgir Free Sewing Machine Online Form 2025-26 LinkApply Now
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment