ಯಾದಗಿರಿ: ಜಿಲ್ಲೆಯ ಶಹಾಪೂರ, ವಡಗೇರಾ ತಾಲೂಕಿನ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಧರತೀ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಹಾಪೂರ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಪದ್ಮವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಟಕ್ಕಾಗಿ ಐಸ್ ಬಾಕ್ಸ್‌ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ಜೊತೆ ತ್ರಿಚಕ್ರ ವಾಹನ ಮತ್ತು ಜೀವಂತ ಮಾರಾಟ ಮಳಿಗೆ ಕೇಂದ್ರವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿಗದಿತ ಗುರಿಗಳನ್ವಯ ನೀಡಿರುವ ಪಟ್ಟಿಯಲ್ಲಿರುವ ಗ್ರಾಮಗಳಿಗೆ ಸೀಮಿತಗೊಳಿಸಲಾಗಿದ್ದು, ಆಸಕ್ತ ಫಲಾಪೇಕ್ಷಿಗಳು ಡಿ.15ರೊಳಗೆ ಅರ್ಜಿ ಸಲ್ಲಿಸಬಹುದು.




Goverment ganaga kalayani
Please give me for this job
Please send me the link