ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಪಡೆಯಲು ಗರಿಷ್ಠ 5 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಪ್ರಸ್ತುತ ವರ್ಷದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಆಹ್ವಾನಿ(Arivu Education Loan Online Application Form 2025)ಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು KMDC ಅಧಿಕೃತ ವೆಬ್ಸೈಟ್ kmdconline.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ಮುಖಾಂತರ ಆಯ್ಕೆಯಾದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಬಿ. ಡಿ.ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 1 ಲಕ್ಷರೂ. ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 50 ಸಾವಿರ ರೂ. ಗಳನ್ನು ಬಿಡುಗಡೆ ಮಾಡಲಾಗುತ್ತದೆ.
ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ್/ ಎಂಜಿನಿಯರಿಂಗ್ /ಟೆಕ್ನಾಲಜಿ (ಬಿ.ಇ/ಬಿ ಟೆಕ್) ಎಂ ಟೆಕ್ ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 50 ಸಾವಿರ ರೂ. ಗಳನ್ನು ಬಿಡುಗಡೆ ಮಾಡಲಾಗುತ್ತದೆ.
ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಗರಿಷ್ಠ 50 ಸಾವಿರ ರೂ. ಗಳನ್ನು ಬಿಡುಗಡೆ ಮಾಡಲಾಗುತ್ತದೆ.
ಬಿ.ಎಸ್ಸಿ (ತೋಟಗಾರಿಕೆ, ಕೃಷಿ, ಅರಣ್ಯ, ಪಶುವೈದ್ಯಕೀಯ, ಪ್ರಾಣಿ ವಿಜ್ಞಾನ, ಆಹಾರ ತಂತ್ರಜ್ಞಾನ ಇತ್ಯಾದಿ) ಕೋಸ್‌ರ್ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕಗರಿಷ್ಠ 50 ಸಾವಿರ ರೂ. ಗಳನ್ನು ಬಿಡುಗಡೆ ಮಾಡಲಾಗುತ್ತದೆ.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 8 ಲಕ್ಷರೂ. ಗಳಿಗಿಂತ ಕಡಿಮೆ ಇರಬೇಕು.
ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿದರದೊಂದಿಗೆ ಮರುಪಾವತಿ ಮಾಡಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹತೆ ಪಡೆಯಲು ಅಲ್ಪಸಂಖ್ಯಾತ (ಕ್ರಿಶ್ಚಿಯನ್ ಹೊರತುಪಡಿಸಿ) ವಿದ್ಯಾರ್ಥಿಗಳು ನಿಗದಿತ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ.
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
CET ಪ್ರವೇಶ ಪತ್ರ
NEET ಪ್ರವೇಶ ಪತ್ರ
SSLC/10 ತರಗತಿಯ ಅಂಕಪಟ್ಟಿ
ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ
ನಷ್ಟ ಪರಿಹಾರ ಬಾಂಡ್
ವಿದ್ಯಾರ್ಥಿಯ ಸ್ವಯಂ ಪೋಷಣೆ ಪತ್ರ
ಪೋಷಕರ ಸ್ವಯಂ ಘೋಷಣೆ ಪತ್ರ
ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ https://kmdconline.karnataka.gov.in/Portal/home ಗೆ ಭೇಟಿ ನೀಡಿ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯ ಮೇಲೆ ಕ್ಲಿಕ್ ಮಾಡಿ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಟ್ಯಾಪ್ ಮಾಡಿ.
ಹೊಸ ಅರ್ಜಿ ಸಲ್ಲಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಕಳುಹಿಸಲಾಗುವ ಓಟಿಪಿಯೊಂದಿಗೆ ಲಾಗಿನ್ ಆಗಿ.
ಅರ್ಜಿಯಲ್ಲಿ ಕೇಳಲಾಗುವ ಸ್ವಯಂ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Arivu Education Loan Online Application Form 2025 Link