ಭಾರತೀಯ ಸೇನೆಯ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) ತಾಂತ್ರಿಕ (ಪುರುಷರ) ಏಪ್ರಿಲ್ 2026 ಮೂಲಕ 350 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ.
ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ 66ನೇ ಕಿರು ಸೇವಾ ಆಯೋಗ (ತಾಂತ್ರಿಕ) ಅವಿವಾಹಿತ ಪುರುಷ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 24, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 22, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-04-2026 ರಂತೆ;
ಕನಿಷ್ಠ ಮಿತಿ – 20 ವರ್ಷಗಳು.
ಗರಿಷ್ಠ ಮಿತಿ – 27 ವರ್ಷಗಳು.
ತರಬೇತಿ ಭತ್ಯೆ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ 56,100ರೂ.ವರೆಗೆ ತರಬೇತಿ ಭತ್ಯೆ ಪಾವತಿಸಲಾಗುತ್ತದೆ.
No
Indian army
Karnataka India the