ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ(Self Employment Direct Loan), ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ(Arya Vysya Aahaara Vahini)/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ(Vasavi Jalashakthi Scheme)ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ hhtp//kacdc.karnataka.gov.in ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ(Arivu Education Loan)ಗೆ – ಸಿಇಟಿ ಹಾಗೂ ನೀಟ್ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಲೇಖನದಲ್ಲಿ ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ, ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – 23-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date) – 31-07-2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಅರ್ಜಿದಾರರು ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.
- ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
- ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆಯಾಗಿರಬೇಕು.
- ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
How to Apply for Arya Vysya Loan Schemes?
ಅರ್ಜಿ ಸಲ್ಲಿಸುವ ವಿಧಾನ
- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ hhtp//kacdc.karnataka.gov.inಗೆ ಭೇಟಿ ನೀಡಿ.

- ನಂತರ ಮುಖಪುಟದಲ್ಲಿ “APPLY ONLINE” ಮೇಲೆ ಕ್ಲಿಕ್ ಮಾಡಿನೀವು ಅರ್ಜಿ ಸಲ್ಲಿಸ ಬಯಸುವ ಯೋಜನೆಯನ್ನು ಆಯ್ಕೆ ಮಾಡಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ವಿಶೇಷ ಸೂಚನೆ:
ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
2019-20ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಚೇರಿ ಹಾಗೂ ನಿಗಮದ ಸಹಾಯವಾಣಿ – 9448451111, ದೂ.ಸಂ-0821-2341194 ನ್ನು ಸಂಪರ್ಕಿಸಬಹುದು.
Important Direct Links:
Arya Vysya Corporation Loan Schemes Online Form 2025 Link | Apply Now |
Official Website | kacdc.karnataka.gov.in |
More Updates | KarnatakaHelp.in |