ಸೇನಾ ಕಲ್ಯಾಣ ಶಿಕ್ಷಣ ಸೊಸೈಟಿ (AWES) PGT, TGT ಮತ್ತು ಇತರೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸೇನಾ ಕಲ್ಯಾಣ ಶಿಕ್ಷಣ ಸೊಸೈಟಿಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪಿಆರ್‌ಟಿ, ಟಿಜಿಟಿ ಹಾಗೂ ಪಿಜಿಟಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಥ ಅಭ್ಯರ್ಥಿಗಳು AWES ಅಧಿಕೃತ ವೆಬ್ ಸೈಟ್ https://awes-guide.register.smartexams.in/ ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Army Welfare Education Society Post Name – PGT, TGT Primary Teacher (PRT) Total Vacancy – Various Posts Apply Mode – Online Job Location – All India (Karnataka)
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 05-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16-08-225
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಶೇ.50% ಅಂಕಗಳೊಂದಿಗೆ ಬಿ. ಎಡ್( B.Ed./M.Ed) ಎರಡು ವರ್ಷದ ಡಿ. ಎಲ್. ಎಡ್(D.El.Ed.) (NCTE ಮಾನ್ಯತೆ ಪಡೆದ ಸಂಸ್ಥೆಯಿಂದ) ಪೂರ್ಣಗೊಳಿಸಿರಬೇಕು.
PGT – B. Ed
TGT – B. Ed
PRT – B.El.Ed /Two-year D.El.Ed
ಅರ್ಜಿ ಸಲ್ಲಿಸುವ ಮೊದಲು ಕಡ್ಡಾಯವಾಗಿ ಅಧಿಕೃತ ಅಧಿಸೂಚನೆ ಓದಿ. ಈ ಲೇಖನ ಕೊನೆಯಲ್ಲಿ ನೀಡಲಾಗಿದೆ.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 40 ವರ್ಷಗಳಿಗಿಂತ ಕಡಿಮೆ
ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ (OST) *ಸಂದರ್ಶನ
ದಾಖಲೆಗಳ ಪರಿಶೀಲನೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 385 ರೂ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆಯನ್ನು ಓದಿ.
AWES ಅಧಿಕೃತ ವೆಬ್ ಸೈಟ್ https://awes-guide.register.smartexams.in/ ಗೆ ಭೇಟಿ ನೀಡಿ.
ಅಭ್ಯರ್ಥಿಗಳು OST 2025 ಗಾಗಿ ನೋಂದಾಯಿಸಿ.
ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮುಖಾಂತರ ಲಾಗಿನ್ ಆಗಿ.
ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.