ಆಯುಷ್ ಇಲಾಖೆ ವತಿಯಿಂದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರು(Professor), ಸಹ ಪ್ರಾಧ್ಯಾಪಕರು ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೆಂಗಳೂರಿನ ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಸಂಸ್ಥೆಯಲ್ಲಿ ಅವಶ್ಯವಿರುವ ಒಟ್ಟು 27 ಬೋಧಕ ವರ್ಗದ ಹುದ್ದೆಗಳನ್ನು ಕನ್ಸಲೆಂಟ್ ಆಧಾರದ ಮೇಲೆ 11 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ayush.karnataka.gov.in ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಆಫ್ಲೈನ್ ಮೂಲಕ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Ayush Department Post Name – Various Professor Vacancies Total Vacancy – 27 Application Process – Offline Job Location – Karnataka
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ -16-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -17-05-2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಆಯುರ್ವೇದದಲ್ಲಿ ಪದವಿ(Degree in Ayurveda) ಪಡೆದಿರಬೇಕು ಹಾಗೂ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ(PG in Related Subjects)ಯನ್ನು ಪೂರ್ಣಗೊಳಿಸಿರಬೇಕು. ವಿದ್ಯಾರ್ಹತೆಯ ಕುರಿತು ವಿವರವಾದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿ.
ವಯೋಮಿತಿ:
ಪ್ರಾಧ್ಯಾಪಕ ಹುದ್ದೆಗೆ:-
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ:-
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ:-
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಸಂಬಳ:
ಸಹಾಯಕ ಪ್ರಾಧ್ಯಾಪಕರು – ರೂ. 45,000/- (ಪ್ರ.ತಿಂ) ಸಹ ಪ್ರಾಧ್ಯಾಪಕರು – ರೂ. 40,000/- (ಪ್ರ.ತಿಂ) ಪ್ರಾಧ್ಯಾಪಕರು – ರೂ. 45,000/- (ಪ್ರ.ತಿಂ)
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ
ಸಂದರ್ಶನ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿಲ್ಲ
How to Apply for Ayush Department Professor Recruitment 2025
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಆಯುಷ್ ಇಲಾಖೆಯ ನೇಮಕಾತಿಯ ಅಧಿಕೃತ ಅರ್ಜಿ ನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ.
ನಂತರ ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
ಅಗತ್ಯವಿರುವ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸಿ.
ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿ.
ಆಯುಕ್ತರು/ಅಧ್ಯಕ್ಷರು, ಸಮಾಲೋಚಕ ಶಿಕ್ಷಕರ ಆಯ್ಕೆ ಸಮಿತಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು-560009