2025-26ನೇ ಸಾಲಿನ ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯು ಮಂಗಳವಾರ ಪ್ರಕಟಿಸಿದೆ.
ಅರ್ಜಿ ಸಲ್ಲಿಕೆಗೆ ಅ.3 ರಿಂದ ನ.3ವರೆಗೆ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳನ್ವಯ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಪಟ್ಟಿ ತಯಾರಿಸಿ ಇಲಾಖೆಯ ವೆಬ್‌ಸೈಟ್ https://sts.karnataka.gov.in/GPSTRHK/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡ್ ಬಳಸಿ ನ.25 ರಿಂದ ಡಿ.5ರೊಳಗೆ ನಿಗದಿತ ಶುಲ್ಕದ ಚಲನನ್ನು ಮುದ್ರಿಸಿಕೊಂಡು ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಿ, ಅದರ ಮೂಲ ಪ್ರತಿ ಜೊತೆಗೆ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ದಾಖಲಾತಿ ಪತ್ರ ಪಡೆದುಕೊಂಡು, ಕಾಲೇಜಿಗೆ ಸೇರ್ಪಡೆಗೊಳ್ಳಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ.




T channapura badakanakoppalu
Good B. Ed application
Result of the college list
Soumya A
Bed
Want to know which college