Bagalkot Zilla Panchayat Recruitment 2024: ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
Bagalkot Zilla Panchayat Recruitment 2024
Bagalkot Zilla Panchayat Recruitment 2024

ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಬಾದಾಮಿ, ಬಾಗಲಕೋಟೆ, ಹನುಗುಂದ, ಜಮಖಂಡಿ ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಹಾಲಗೇರಿ, ದೇವನಾಳ, ಹಾವರಗಿ, ಕಂಕಣವಾಡಿ, ಗ್ರಾಮ ಪಂಚಾಯಿತಿಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ದ್ವಿತೀಯ ಪಿಯುಸಿ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment