Ballari Anganwadi Recruitment 2024: ಬಳ್ಳಾರಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ

Follow Us:

Ballari Anganwadi Recruitment 2024: ಬಳ್ಳಾರಿ ಪಟ್ಟಣ ಪಂಚಾಯಿತಿಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಳ್ಳಾರಿ ಪಟ್ಟಣ ಪಂಚಾಯಿತಿಯ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 77 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ 22 ಹುದ್ದೆಗಳು, ಅಂಗನವಾಡಿ ಸಹಾಯಕಿ 55 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಮಹಿಳೆಯರಲ್ಲಿ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಬಯಸುತ್ತಿರುವ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

Ballari Anganwadi Recruitment 2024
Ballari Anganwadi Recruitment 2024

ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಸೆಪ್ಟಂಬರ್ 10, 2024 ರ‌ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Shortview of Ballari Anganwadi Notification 2024

Organization Name – Women & Child Development (WCD)
Post Name – Anganwadi Worker and Helper
Total Vacancy – 77
Application Process: Online
Job Location – Ballari

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
  • ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟಂಬರ್ 10, 2024

ಖಾಲಿ ಹುದ್ದೆಗಳ ವಿವರ:

ಬಳ್ಳಾರಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳು

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 22
  • ಅಂಗನವಾಡಿ ಸಹಾಯಕಿ ಹುದ್ದೆಗಳು – 55

ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
  • ಅಂಗನವಾಡಿ ಸಹಾಯಕಿ : SSLC / ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ
  • ದಾಖಲಾತಿ ಪರಿಶೀಲನೆ

Also Read: Navy SSC Executive IT Officer Recruitment 2024: ನೌಕಾಪಡೆಯ ಎಕ್ಸಿಕ್ಯೂಟಿವ್ ಐಟಿ ಅಧಿಕಾರಿ ಹುದ್ದೆಗಳ ನೇಮಕಾತಿ

How to Apply For Ballari Anganwadi Recruitment 2024

ಅರ್ಜಿ ಸಲ್ಲಿಸುವ ವಿಧಾನ

  • ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ karnemakaone.kar.nic.in ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ;

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬಳ್ಳಾರಿ, ಅಥವಾ ದೂರವಾಣಿ ಸಂಖ್ಯೆ 08329-268609 ಮತ್ತು 08392266080ಕ್ಕೆ ಸಂಪರ್ಕಿಸಬಹುದು.

Important Direct Links:

Official Notification PDFDownload
Notification & Guidelines PDFDownload
Online Application Form LinkApply Link Here
More UpdatesKarnataka Help.in

Leave a Comment