ಬೆಂಗಳೂರು ವಿಶ್ವವಿದ್ಯಾಲಯದ ಎಂ.ಸಿ.ಎ. ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಒಂದು ವರ್ಷದ ಅವಧಿವರೆಗೆ ಕಾರ್ಯನಿರ್ವಹಿಸಲು, ಎಂಸಿಎ, ಎಂಎಸ್ಸಿ(ಕಂಪ್ಯೂಟರ್ ಸೈನ್ಸ್) ಅಥವಾ ಎಂಟೆಕ್(ಕಂಪ್ಯೂಟರ್ ಸೈನ್ಸ್) ವಿದ್ಯಾರ್ಹತೆಯೊಂದಿಗೆ ಎಸ್‌ಎಲ್‌ಇಟಿ ಅಥವಾ ಪಿಎಚ್.ಡಿ(ಕಂಪ್ಯೂಟರ್ ಸೈನ್ಸ್) ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹43,520ರಿಂದ ₹50,000ರವರೆಗೆ ಗೌರವಧನ ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನ. 9ರೊಳಗೆ ‘ಸಂಯೋಜಕರು, ಎಂಸಿಎ ಕಾರ್ಯಕ್ರಮ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು’ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ mca@bub.ernet.in ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಕೋರಲಾಗಿದೆ.