ಬ್ಯಾಂಕ್ ಆಫ್ ಬರೋಡಾ(BOB)ದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ 418 ವಿವಿಧ ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಹಾಗೂ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.19 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳನ್ನು ನಿಯಮಿತ ಆಧಾರ ಮೇಲೆ ನೇಮಕ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು BOB ಅಧಿಕೃತ ವೆಬ್ಸೈಟ್ ಲಿಂಕ್ https://bankappsweb.bankofbaroda.bank.in/BOBRECRUITMENT_JAN_ITD2608724/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 30, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 19, 2026 ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಫೆಬ್ರವರಿ 19, 2026 ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ ಬಿ.ಇ/ ಬಿ.ಟೆಕ್./ಎಂ.ಟೆಕ್/ಎಂ.ಇ./ಎಂಸಿಎ ಪದವಿ ಪೂರ್ಣಗೊಳಿಸಿರಬೇಕು.
ಹೆಚ್ಚಿನ ವಿದ್ಯಾರ್ಹತೆಯ ವಿವರಗಳಿಗಾಗಿ ಅಭ್ಯರ್ಥಿಗಳು ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ: 01-01-2026 ರಂತೆ;
✓ ಸೀನಿಯರ್ ಮ್ಯಾನೇಜರ್ ಹುದ್ದೆಗೆ: ಕನಿಷ್ಠ ಮಿತಿ 27 ವರ್ಷಗಳು, ಗರಿಷ್ಠ ಮಿತಿ 37 ವರ್ಷಗಳು
✓ ಮ್ಯಾನೇಜರ್ ಹುದ್ದೆಗೆ: ಕನಿಷ್ಠ ಮಿತಿ 24 ವರ್ಷಗಳು, ಗರಿಷ್ಠ ಮಿತಿ 34 ವರ್ಷಗಳು.
✓ ಆಫೀಸರ್ ಹುದ್ದೆಗೆ: ಕನಿಷ್ಠ ಮಿತಿ 22 ವರ್ಷಗಳು, ಗರಿಷ್ಠ ಮಿತಿ – 32 ವರ್ಷಗಳು.
ವಯೋಮಿತಿ ಸಡಿಲಿಕೆ: ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಇತರೆ ಹಿಂದುಳಿದ ವರ್ಗಗಳ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10-15ವರ್ಷಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 05-10 ವರ್ಷಗಳು.
ಸಂಬಳ: ಆಫೀಸರ್ ಹುದ್ದೆಗಳಿಗೆ – ₹48,480 ರಿಂದ 85,920 ಮ್ಯಾನೇಜರ್ ಹುದ್ದೆಗಳಿಗೆ – ₹64,820 ರಿಂದ 93,960 ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ – ₹85,920 ರಿಂದ 1,05,280
ಆಯ್ಕೆ ವಿಧಾನ: ಆನ್ಲೈನ್ ಪರೀಕ್ಷೆ ಸಂದರ್ಶನ ದಾಖಲಾತಿ ಪರಿಶೀಲನೆ ಅರ್ಜಿ ಶುಲ್ಕ: ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ – ₹850 ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ, ಮಾಜಿ ಸೈನಿಕ, ಡಿಇಎಸ್ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ₹175
ಅರ್ಜಿ ಸಲ್ಲಿಸುವ ವಿಧಾನ: • ಮೊದಲಿಗೆ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್https://bankappsweb.bankofbaroda.bank.in/BOBRECRUITMENT_JAN_ITD2608724/ ಗೆ ಭೇಟಿ ನೀಡಿ.
• ನಂತರ “IT Dept Regular Jan 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿ ಸಲ್ಲಿಸಲು ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಅರ್ಜಿದಾರರಾಗಿದ್ದಲ್ಲಿ ನೋಂದಾಯಿಸಿ.
• ಮುಂದಿನ ಹಂತದಲ್ಲಿ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ, ಶೈಕ್ಷಣಿಕ ದಾಖಲೆ, ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.• ಕೊನೆದಾಗಿ ಅರ್ಜಿಯನ್ನು ಮತ್ತೊಮ್ಮೆ ಪರೀಶೀಲನೆ ಮಾಡಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
Important Direct Links: