Bank of India Specialist Officer (SO) Notification 2025
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಬ್ಯಾಂಕ್ ಆಫ್ ಇಂಡಿಯಾ (bank of India)ನಲ್ಲಿ 115 ಸ್ಪೇಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ವಿವಿಧ ವಿಭಾಗಗಳಲ್ಲಿ ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಕಾನೂನು ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.30ರೊಳಗೆ ಅಧಿಕೃತ ವೆಬ್ ಸೈಟ್ https://ibpsreg.ibps.in/boioct25/ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 30, 2025
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಅಥವಾ ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ವಿಭಾಗದಲ್ಲಿ ಬಿ.ಇ/ಬಿ.ಟೆಕ್/ಎಂ.ಟೆಕ್/ಎಂಸಿಎ/ಎಂ.ಎಸ್ಸಿ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
01-10-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 22 ರಿಂದ 28 ವರ್ಷಗಳು(ಹುದ್ದೆಗಳಿಗೆ ಅನುಗುಣವಾಗಿ) ಗರಿಷ್ಠ ವಯಸ್ಸಿನ ಮಿತಿ – 32 ರಿಂದ 45 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ)
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ -10 ವರ್ಷಗಳು
ಆಯ್ಕೆ ಪ್ರಕ್ರಿಯೆ:
• ಆನ್ಲೈನ್ ಪರೀಕ್ಷೆ
• ಸಂದರ್ಶನ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 64,820ರೂ. ಗಳಿಂದ – 1,20,940ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ – 850ರೂ.
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 175ರೂ.
ಅರ್ಜಿ ಸಲ್ಲಿಸುವ ವಿಧಾನ:
• IBPS ಅಧಿಕೃತ ವೆಬ್ ಸೈಟ್ https://ibpsreg.ibps.in/boioct25/ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದಲ್ಲಿ ನೋಂದಣಿ ಸಂಖ್ಯೆ, ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.
• ನಂತರ “ಸ್ಕೇಲ್ IV ಯೋಜನೆ ಸಂಖ್ಯೆ 2024-25/05 ರವರೆಗೆ ವಿವಿಧ ಸ್ಟ್ರೀಮ್ಗಳಲ್ಲಿ ಅಧಿಕಾರಿಗಳ ನೇಮಕಾತಿ“- ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ- ವಿವರಗಳನ್ನು ನಮೂದಿಸಿ.
• ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.