ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಿನ ಪಟ್ಟಿಯಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 600 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ಅಪ್ರೆಂಟಿಸ್ ತರಬೇತಿ ನೀಡಲಿದೆ. ಆಸಕ್ತರು ಜ.25ರೊಳಗೆ ಅರ್ಜಿ ಸಲ್ಲಿಸಬಹುದು.
ತನ್ನ 29 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಶಾಖೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು 1 ವರ್ಷದ ಅವಧಿವರೆಗೆ ತರಬೇತಿ ನೀಡಲಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಕೆಗೆ ಅರ್ಹರು. ಮೆರಿಟ್ ಆಧಾರಿತ ಆಯ್ಕೆ ಪ್ರಕ್ರಿಯೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ವೆಬ್ಸೈಟ್ ಲಿಂಕ್ https://ibpsreg.ibps.in/bomdec25/ಗೆ ಭೇಟಿ ನೀಡಿ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜನವರಿ 15, 2026
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 25, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜನವರಿ 25, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಗಳಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
• ಅಪ್ರೆಂಟಿಸ್ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯಲ್ಲಿ ಓದುವುದು, ಬರೆಯುವುದು ಮತ್ತು ಮಾತನಾಡುವುದರಲ್ಲಿ ಪ್ರವೀಣರಾಗಿರಬೇಕು.
• ಅಪ್ರೆಂಟಿಸ್ 10 ಅಥವಾ 12 ನೇ ತರಗತಿಯ ಅಂಕಪಟ್ಟಿ/ಪ್ರಮಾಣಪತ್ರದಲ್ಲಿ ಸ್ಥಳೀಯ ಭಾಷೆ ಅನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
ವಯೋಮಿತಿ:
30-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ರಿಂದ 15 ವರ್ಷಗಳು.
ಸ್ಟೈಫಂಡ್:
ಅಭ್ಯರ್ಥಿಗಳಿಗೆ ಮಾಹೆಯಾನ ₹12,300 ಸ್ಟೈಫಂಡ್ ಅನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 150ರೂ. + GST ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ – 100ರೂ. + GST ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪರಿ ಹೇಗೆ?
• ಮೊದಲಿಗೆ ಅಭ್ಯರ್ಥಿಗಳು IBPS ಅಧಿಕೃತ ವೆಬ್ಸೈಟ್ https://ibpsreg.ibps.in/bomdec25/ಗೆ ಭೇಟಿ ನೀಡಿ.
Bank Of Maharashtra Apprentice Recruitment 2025-26 Online Application Form
• ಬಳಿಕ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ, ಕೊನೆಯಲ್ಲಿ ಅರ್ಜಿಯನ್ನು ಪರಿಶೀಲಿಸಿ ಮತ್ತೊಮ್ಮೆ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.