ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) 2024- 25 ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಾಲಿಕೆಯ ವ್ಯಾಪ್ತಿಯ ಪೌರಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಬಿಬಿಎಂಪಿ ಪ್ರತಿವರ್ಷ ನಡೆಸುವ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಧನಸಹಾಯ, ತರಬೇತಿ ಹಾಗೂ ವಾಹನ ಖರೀಗೆ ಬೇಕಾದ ಸಾಲ ಸೌಲಭ್ಯಗಳು ಹಾಗೂ ಸಬ್ಸಿಡಿಗಳನ್ನು ನೀಡುತ್ತಾ ಬಂದಿದೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಆಹ್ವಾನಿಸಲಾಗಿದ್ದು ಈ ಕುರಿತಂತೆ ಪ್ರಮುಖ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.