ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) 2024- 25 ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಿದ್ದು, ಪಾಲಿಕೆಯ ವ್ಯಾಪ್ತಿಯ ಪೌರಕಾರ್ಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಬಿಬಿಎಂಪಿ ಪ್ರತಿವರ್ಷ ನಡೆಸುವ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಧನಸಹಾಯ, ತರಬೇತಿ ಹಾಗೂ ವಾಹನ ಖರೀಗೆ ಬೇಕಾದ ಸಾಲ ಸೌಲಭ್ಯಗಳು ಹಾಗೂ ಸಬ್ಸಿಡಿಗಳನ್ನು ನೀಡುತ್ತಾ ಬಂದಿದೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳ ಆಹ್ವಾನಿಸಲಾಗಿದ್ದು ಈ ಕುರಿತಂತೆ ಪ್ರಮುಖ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
BBMP Kalyana Karyakrama Application Form 2025
ಕಲ್ಯಾಣ ಕಾರ್ಯಕ್ರಮಗಳ ವಿವರಗಳು;
- ಒಂಟಿ ಮನೆ ನಿರ್ಮಾಣ(BBMP Onti Mane Scheme) ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲ್ಯಾಟ್ ಖರೀದಿಗೆ ಧನಸಹಾಯ.
- ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆಯಂತ್ರ ವಿತರಣೆ(Free Sewing Machine).
- ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ಟ್ರಿಕ್ ದ್ವಿ ಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ).
- ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್ ಚೇರ್ ವಿತರಣೆ.
- ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರಚಿಕಿತ್ಸೆಗೆ ಧನಸಹಾಯ.
- ಬೀದಿ ಬದಿ ವ್ಯಾಪಾರಸ್ಥರಿಗೆ ಎಲೆಕ್ಟ್ರಿಕ್ ವೆಂಡಿಂಗ್ ಮೆಷಿನ್ ವಿತರಣೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪೌರ ಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ.
- ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ/ಕಾರು ಖರೀದಿಗೆ ಸಹಾಯ.
- ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್(Free Laptop) ವಿತರಣೆ.
- ಸಾಂಸ್ಕೃತಿಕ ಹಾಗೂ ವಿಶೇಷ ಚೇತನ ವಿದ್ಯಾ ಸಂಸ್ಥೆ ಗಳಿಗೆ ಆರ್ಥಿಕ ನೆರವು.
- ಶಾಲಾ ಶುಲ್ಕ ಮರುಪಾವತಿ, ಉನ್ನತ/ವಿದೇಶ ವ್ಯಾಸಂಗಕ್ಕೆ ಸಹಾಯಧನ.
ಅರ್ಜಿ ಸಲ್ಲಿಸಲು ಕೊನೆಯ ದಿನ:
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 29-04-2025
ಅರ್ಜಿ ಸಲ್ಲಿಸುವುದು ಹೇಗೆ?
- ಅರ್ಜಿಗಳನ್ನು ಸಂಬಂಧಿತ ವಲಯ ಸಹಾಯಕ ಕಂದಾಯ ಅಧಿಕಾರಿ (ಕಲ್ಯಾಣ) ಕಚೇರಿಯಲ್ಲಿ ಸಲ್ಲಿಸಬಹುದು.
- ಅರ್ಜಿದಾರರು ಅಗತ್ಯ ದಾಖಲೆಗಳೊದಿಗೆ ಸ್ವಯಂ ದೃಢೀಕರಣ ಸಲ್ಲಿಸಬೇಕು.
Important Direct Links:
Official Website | bbmp.gov.in |
More Updates | Karnataka Help.in |