ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಯ ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ರಿಫರಿಲ್ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 23 ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ದಾಖಲೆಗಳ ಜೆರಾಕ್ಸ್ ಪ್ರತಿ ಮತ್ತು ಭಾವಚಿತ್ರದೊಂದಿಗೆ ನಗರ ಯೋಜನಾ ನಿರ್ವಹಣಾ ಅಧಿಕಾರಿಗಳ ಕಚೇರಿ ಬೆಂಗಳೂರು ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿಲ್ಲ ಖಾಲಿ ಇರುವ ಹುದ್ದೆಗಳು ಬರ್ತೀಯ ಆಗುವವರೆಗೂ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. BBMP Medical Officer Recruitment 2024 ಈ ನೇಮಕಾತಿಗೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of BBMP Medical Officer Notification 2024
Organization Name – Bruhat Bengaluru Mahanagara Palike
Post Name – Medical Officer
Total Vacancy – 23
Application Process: Offline
Job Location – Bengaluru
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್ ಪದವಿಯೊಂದಿಗೆ ಕೆ.ಎಂ.ಸಿ ನಲ್ಲಿ ನೊಂದಣಿ ಪಡೆದುಕೊಂಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿಯು ಗರಿಷ್ಠ 65 ವರ್ಷಗಳು ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಗೆ ₹47,250 ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ವಿದ್ಯಾರ್ಹತೆ
- ಸಂದರ್ಶನ
- ಮೊದಲು ಬಂದವರಿಗೆ ಹೆಚ್ಚಿನ ಆದ್ಯತೆ
Also Read: India Post Skilled Artisan Recruitment 2024: 8ನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ
How to Apply for BBMP Medical Officer Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ನಿಗದಿತ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ
ನಗರ ಯೋಜನಾ ನಿರ್ವಾಹಣಾಧಿಕಾರಿ ಕಚೇರಿ
#304, ಅನೆಕ್ಸ್-3 ಕಟ್ಟಡ, 3ನೇ ಮಹಡಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿ
ಎನ್.ಅರ್ ಚೌಕ, ಬೆಂಗಳೂರು – 560-002
Important Direct Links:
Official Notification PDF | Download |
Official Website | bbmp.gov.in |
More Updates | KarnatakaHelp.in |