ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶ(BCM Hostel Online Application 2025-26)ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – 15-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16-06-2025
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:
• ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ – 2.5 ಲಕ್ಷರೂ. ಒಳಗೆ ಇರಬೇಕು.
• ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ – 1 ಲಕ್ಷರೂ. ಒಳಗೆ ಇರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಸಿಡಬ್ಲ್ಯೂ ಡಿ ಹಾಸ್ಟೆಲ್ ಪೋರ್ಟಲ್ https://shp.karnataka.gov.in/bcwd ಗೆ ಭೇಟಿ ನೀಡಿ.ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಿಶೇಷ ಸೂಚನೆ:
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ ಪರಿಶೀಲಿಸಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳು ಉಂಟಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ
ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Important Direct Links:
BCM Pre Matric Hostel Online Application 2025-26 Link | Apply Now |
Official Website | bcwd.karnataka.gov.in |
More Updates | Karnataka Help.in |