2025-26ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಮಾನ್ಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಿಸಿಡಬ್ಲ್ಯೂ ಡಿ ವಿದ್ಯಾರ್ಥಿ ನಿಲಯ ಪೋರ್ಟಲ್ https://shp.karnataka.gov.in/bcwd/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜುಲೈ 15, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 14, 2025
ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ – ಆಗಸ್ಟ್ 19, 2025
ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆಯ ದಿನಾಂಕ- ಆಗಸ್ಟ್ 21, 2025
ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ – ಆಗಸ್ಟ್ 30, 2025
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಒಳಗಿರಬೇಕು.
ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ. ಒಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
10ನೇ ತರಗತಿ ಅಂಕಪಟ್ಟಿ
ಮಾನ್ಯವಾದ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿಶ್ವವಿದ್ಯಾಲಯದಿಂದ ನೀಡಿರುವ ನೋಂದಣಿ ಸಂಖ್ಯೆ
How to Apply for BCM Degree Hostel Admission Application 2025-26
ಅರ್ಜಿ ಸಲ್ಲಿಸುವ ವಿಧಾನ;
ವಿದ್ಯಾರ್ಥಿ ನಿಲಯ ಪೋರ್ಟಲ್ https://shp.karnataka.gov.in/bcwd/ ಗೆ ಭೇಟಿ ನೀಡಿ.
ಮೆಟ್ರಿಕ್ ನಂತರದ 10ನೇ ತರಗತಿಗಿಂತ ಮೇಲ್ಪಟ್ಟ ತರಗತಿ ಅಥವಾ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪೋಸ್ಟ್‌ಮೆಟ್ರಿಕ್ ಅಡಿಯಲ್ಲಿ ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಬಹುದು ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
SSP ಖಾತೆಯಿಂದ ಲಾಗಿನ್ ಆಗಿ ಅಥವಾ ಹೊಸದಾಗಿ SSP ಖಾತೆ ತೆರೆಯಿರಿ.
ನಂತರ Apply for Hostel ಲಿಂಕ್ ಮೇಲೆ ಕ್ಲಿಕ್ ಮಾಡಿ ಜಾತಿ ಆದಾಯ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ.
ಬಳಿಕ ವಿದ್ಯಾರ್ಥಿಯ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ.
ನಿಮ್ಮ ಆದ್ಯತೆಯ ಅನುಸಾರ ವಸತಿ ನಿಲಯಗಳನ್ನು ಆಯ್ಕೆ ಮಾಡಿ.
ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bowdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ – 8050770004 ಮತ್ತು 8050770005ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Important Direct Links:
Post Matric BCM Hostel Degree Admission 2025-26 Application Form Link
Good support
I need Bcm application to process
Llb ge hostel sigutta
When ever medical student hostel aplication open
Hostel aplication link