ಉಚಿತ ಸೇನಾ ತರಬೇತಿಗೆ ಅರ್ಜಿ ಆಹ್ವಾನ; ಕಲಬುರಗಿಯಲ್ಲಿ ತರಬೇತಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ತಯಾರಿ ನಡೆಸುತ್ತಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ 3ನೇ ಬ್ಯಾಚ್ ಪ್ರಾರಂಭಿಸಲು ಆಸಕ್ತ ಬಾಲಕರಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರುವ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 17 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 20 ವರ್ಷಗಳು
ಅಭ್ಯರ್ಥಿಯು 01- ಸೆಪ್ಟೆಂಬರ್-2005 ರಿಂದ 01- ಸೆಪ್ಟೆಂಬರ್-2008ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ತರಬೇತಿಯ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಕಲಬುರಗಿ ಜಿಲ್ಲೆ ಕೇಂದ್ರ ಸ್ಥಳದಲ್ಲಿ ತರಬೇತಿಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ & 3ಬಿ ವರ್ಗಕ್ಕೆ ಸೇರಿರಬೇಕು.
• ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ (ಪ್ರವರ್ಗ-1 ಅಭ್ಯರ್ಥಿಗಳಿಗೆ 2.50 ಲಕ್ಷರೂ.ಗಳು ಮತ್ತು ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ 1 ಲಕ್ಷರೂ.ಗಳ ಮಿತಿಯಲ್ಲಿರಬೇಕು.
ಆಯ್ಕೆ ವಿಧಾನ:
ಉಲ್ಲೇಖಿಸಲಾಗಿರುವುದಿಲ್ಲ.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು.
ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ಸಂಖ್ಯೆ-8105085410, 9148489157ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
Free Army Training 2025-26 Application Form PDF Link
10thPass
Result 92.64
Hassan college