ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

Published on:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ.

ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಹೆಯಾನ 10,000ರೂ. ವರೆಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಲಾಗುತ್ತದೆ. ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 09 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 09, 2026

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:

• ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

• ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ- 1 II(ಎ), III(ಎ) ಅಥವಾ 11(ಬಿ) ವರ್ಗಕ್ಕೆ ಸೇರಿದವರಾಗಿರಬೇಕು.

• ಅಭ್ಯರ್ಥಿಯ ಅಥವಾ ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-1 ಅಭ್ಯರ್ಥಿಗಳಿಗೆ 4.50ಲಕ್ಷರೂ. ಹಾಗೂ ಪ್ರವರ್ಗ-II(ಎ), III(ಎ) ಮತ್ತು III(ಬಿ) ಅಭ್ಯರ್ಥಿಗಳಿಗೆ – 3.50ಲಕ್ಷರೂ. ಮಿತಿಯೊಳಗಿರಬೇಕು.

• ಕೇಂದ್ರ ಸರ್ಕಾರ/ರಾಜ್ಯ ಸರ್ಕಾರ/ಅನುದಾನಿತ ಸಂಸ್ಥೆ/ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.

• ಅಭ್ಯರ್ಥಿಯು ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಕರ್ನಾಟಕದಲ್ಲಿರುವ ಸಂಸ್ಥೆಗಳಲ್ಲಿ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.

• ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಯು ಭಾರತ ಸರ್ಕಾರ/ಕರ್ನಾಟಕ ಸರ್ಕಾರ/ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿರಬಾರದು.

• ಅಭ್ಯರ್ಥಿಯು ಪಿಎಚ್.ಡಿ ಅಧ್ಯಯನವನ್ನು ಅರ್ಧದಲ್ಲಿ ಮೊಟಕುಗೊಳಿಸಬಾರದು. ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಗೆ ನೀಡಿದ ವ್ಯಾಸಂಗ ವೇತನ/ಫೆಲೋಶಿಪ್ ಮೊತ್ತವನ್ನು ಸಂಬಂಧಪಟ್ಟ ಅಭ್ಯರ್ಥಿ ಹಾಗೂ ಅವರ ತಂದೆ-ತಾಯಿ/ಪೋಷಕರು ಸರ್ಕಾರಕ್ಕೆ ಹಿಂದಿರುಗಿಸಬೇಕಾಗುತ್ತದೆ.

• ಒಂದೇ ಕುಟುಂಬದ ಗರಿಷ್ಠ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಶೇ.55% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿ ಸಂಶೋಧನಾ ಮಾರ್ಗದರ್ಶಕರ ಅಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.

• ಅಭ್ಯರ್ಥಿಗಳು ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನಕ್ಕಾಗಿ ಮಾಡಿಸಿರುವ ನೋಂದಾಣಿ ದಿನಾಂಕವು – 09-01-2026 ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿರಬೇಕು.

ವಯೋಮಿತಿ:

09-01-2026 ರಂತೆ;

ಗರಿಷ್ಠ ವಯೋಮಿತಿ – 35 ವರ್ಷಗಳು

ವೇತನ/ಫೆಲೋಶಿಪ್ ಮಾಹಿತಿ:

ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 10,000ರೂ.ಗಳಂತೆ ಗರಿಷ್ಠ 03 ವರ್ಷಗಳ ಅವಧಿಗೆ ಹಾಜರಾತಿಗೆ ಅನುಗುಣವಾಗಿ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಪ್ರತಿ ತಿಂಗಳು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಸದರಿ ಯೋಜನೆಯಡಿ ಅಭ್ಯರ್ಥಿಗಳನ್ನು ಸ್ನಾತಕೋತ್ತರ ಪದವಿಯಲ್ಲಿ ಪಡೆದಿರುವ ಅಂಕಗಳು, ಪ್ರವರ್ಗವಾರು ಮೀಸಲಾತಿ ಹಾಗೂ ಅನುದಾನ ಲಭ್ಯತೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು.

ಛಾಪಾ ಕಾಗದ ಸಲ್ಲಿಕೆ:

ಅಭ್ಯರ್ಥಿಗಳು ಇಲಾಖಾ ವೆಬ್-ಸೈಟ್ ನಲ್ಲಿ ಲಭ್ಯವಿರುವ ಮುಚ್ಚಳಿಕೆ ಪತ್ರದ ನಮೂನೆಯೊಂದಿಗೆ 100ರೂ. ಛಾಪಾ ಕಾಗದ [ಒಂದನೇ ಪಾರ್ಟಿ ಅಭ್ಯರ್ಥಿ ಹಾಗೂ 2ನೇ ಪಾರ್ಟಿ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು] ಎಂಬುದಾಗಿ ಮಾಹಿತಿ ನಮೂದಿಸಿ ಸಹಿಗಳನ್ನೊಳಗೊಂಡ ಒರಿಜಿನಲ್ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

  • ಅಭ್ಯರ್ಥಿಯ 2 ಭಾವಚಿತ್ರಗಳು
  • ಎಸ್.ಎಸ್.ಎಲ್.ಸಿ/10ನೇ ತರಗತಿಯ ಅಂಕಪಟ್ಟಿ.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಾಸಸ್ಥಳ ಪ್ರಮಾಣ ಪತ್ರ
  • ಸ್ನಾತಕೋತ್ತರ ಪದವಿಯ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳು
  • ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿರುವ ಬಗ್ಗೆ ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಯಿಂದ ಪ್ರಮಾಣ ಪತ್ರ (ಇದರಲ್ಲಿ ನೋಂದಣಿ ದಿನಾಂಕವು ಕಡ್ಡಾಯವಾಗಿ ನಮೂದಾಗಿರಬೇಕು) ಇತ್ಯಾದಿ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

• ಅಭ್ಯರ್ಥಿಗಳು ಮೊದಲಿಗೆ BCWD ಅಧಿಕೃತ ಜಾಲತಾಣ https://bcwd.karnataka.gov.in/157/inviting-applications-for-phd-2025-26/kn ಕ್ಕೆ ಭೇಟಿ ನೀಡಿ.

• ಯೋಜನೆಯ ವಿವರವಾದ ಮಾಹಿತಿ ಹಾಗೂ ಪಿ.ಹೆಚ್.ಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಂಡು.

• ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿಗಳನ್ನು ನಮೂದಿಸಿ.

• ಮುಚ್ಚಳಿಕೆ ಪತ್ರದ ನಮೂನೆ, ವಿಶ್ವವಿದ್ಯಾಲಯದಿಂದ ದೃಢೀಕರಣ ಪತ್ರದ ನಮೂನೆ ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.

• ಅರ್ಜಿ ಹಾಗೂ ಎಲ್ಲಾ ದಾಖಲೆಗಳ ಒಂದು ಸೆಟ್ ದೃಢೀಕೃತ ಪ್ರತಿಯನ್ನು ಅಭ್ಯರ್ಥಿಗಳು ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ವಿಶ್ವವಿದ್ಯಾಲಯ/ಸಂಸ್ಥೆ ಇರುವಂತಹ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಜನವರಿ 09ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ಸಹಾಯವಾಣಿ ಸಂಖ್ಯೆ 8050770004ಗೆ ಸಂಪರ್ಕಿಸಬಹುದು.

Important Direct Links:

ಪಿ.ಹೆ.ಚ್ ಡಿ ಅರ್ಜಿ ನಮೂನೆDownload
ಮುಚ್ಚಳಿಕೆ ಪತ್ರದ ನಮೂನೆDownload
ವಿಶ್ವವಿದ್ಯಾಲಯದಿಂದ ದೃಢೀಕರಣ ಪತ್ರದ ನಮೂನೆDownload
Official Websitebcwd.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment