BCWD Post Matric Scholarship 2025: ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ(Fee Reimbursement), ಮತ್ತು ವಿದ್ಯಾಸಿರಿ(Vidyasiri) – [ಊಟ ಮತ್ತು ವಸತಿ ಸಹಾಯ ಯೋಜನೆ]ಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಯಲು SSP ಪೋರ್ಟಲ್ https://ssp.postmatric.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕಟಣೆಯ ದಿನಾಂಕ – ಜುಲೈ 28, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 30, 2025
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
• ಅಭ್ಯರ್ಥಿಯು ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
• ವಿದ್ಯಾರ್ಥಿಯ ತಂದೆ-ತಾಯಿ/ಪೋಷಕರ ಕುಟುಂಬದ ವಾರ್ಷಿಕ ಆದಾಯವು ಈ ಕೆಳಗಿನಂತಿರಬೇಕು;
ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ರೂ 2.50ಲಕ್ಷ
ಪ್ರವರ್ಗ-2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ರೂ1.00ಲಕ್ಷ
• ಅರ್ಜಿ ಸಲ್ಲಿಸಲು ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಹೆಚ್ಚಿನ ಅರ್ಹತೆಗಳಿಗಾಗಿ ಅಭ್ಯರ್ಥಿಗಳು ತಪ್ಪದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ https://bcwd.karnataka.gov.in/ನ ಸೇವೆಗಳು ಮತ್ತು ಯೋಜನೆಗಳು ವಿಭಾಗದಲ್ಲಿ (ವಿದ್ಯಾರ್ಥಿವೇತನ ಹಾಗೂ ಯೋಜನೆಗಳಿಗೆ ಅನುಗುಣವಾಗಿ)ನೀಡಲಾಗಿರುವ ವಿವರವಾದ ಅರ್ಹತೆಗಳನ್ನು ಪರಿಶೀಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿಶ್ವವಿದ್ಯಾಲಯದಿಂದ ನೀಡಿರುವ ನೋಂದಣಿ ಸಂಖ್ಯೆ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
10ನೇ ತರಗತಿ ಅಂಕಪಟ್ಟಿ
ಮಾನ್ಯವಾದ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
How to Apply for SSP BCWD Post Matric Scholarship 2025
ಅರ್ಜಿ ಸಲ್ಲಿಸುವ ವಿಧಾನ;
SSP ಅಧಿಕೃತ ವೆಬ್ಸೈಟ್https://ssp.postmatric.karnataka.gov.in/ ಗೆ ಭೇಟಿ ನೀಡಿ.
SSP ಖಾತೆಯಿಂದ ಲಾಗಿನ್ ಆಗಿ ಅಥವಾ ಹೊಸದಾಗಿ SSP ಖಾತೆ ತೆರೆಯಿರಿ.
ನೀವು ಅರ್ಜಿ ಸಲ್ಲಿಸ ಬಯಸುವ (ವಿದ್ಯಾರ್ಥಿವೇತನ) ಅನ್ನು ಆಯ್ಕೆ ಮಾಡಿ.
ಬಳಿಕ ವಿದ್ಯಾರ್ಥಿಯ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ.
ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.